ಮಹಿಳೆಯರ ಖೋ ಖೋ ಆಯ್ಕೆ ಪ್ರಕ್ರಿಯೆಯ ಉದ್ಘಾಟನಾ ಸಮಾರಂಭ
Inaugural ceremony of women's Kho Kho selection process
ಸವದತ್ತಿ 24 : ನಗರದ ನಿಗದಿತ ಸಮಯದೊಳಗೆ ಸಾಧಿಸುವ ಗುರಿಯಿಟ್ಟುಕೊಂಡು ಶ್ರಮವಹಿಸಿದಲ್ಲಿ ಗೆಲುವನ್ನು ಪಡೆಯಬಹುದು. ಪ್ರತಿಯೊಬ್ಬ ಸ್ಪರ್ಧಾಳು ನಿರಂತರ ಶ್ರಮವಹಿಸಿ ಪೂರ್ವಸಿದ್ಧತೆ ಮಾಡಿಕೊಳ್ಳಬೇಕೆಂದು ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಬಿ.ವಿ.ಮಲಗೌಡರ ಹೇಳಿದರು. ನಗರದ ಕೆ.ಎಲ್.ಇ. ಸಂಸ್ಥೆಯ ಎಸ್. ವ್ಹಿ. ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯ ಮತ್ತು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇವುಗಳ ಸಹಯೋಗದಲ್ಲಿ ಏಕ ವಲಯ ಅಂತರ್ ಕಾಲೇಜುಗಳ ಎರಡು ದಿನಗಳ ಮಹಿಳೆಯರ ಖೋ ಖೋ ಆಯ್ಕೆ ಪ್ರಕ್ರಿಯೆಯ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯು ದೇಹದ ಆರೋಗ್ಯವನ್ನು ಕಾಪಾಡುವದರ ಜೊತೆಗೆ ಮಾನಸಿಕ ಗಟ್ಟಿತನವನ್ನು ತರುತ್ತದೆ. ಅದಕ್ಕಾಗಿಯೇ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ ಎಂದು ಹೇಳುತ್ತಾರೆ. ವಿದ್ಯಾರ್ಥಿಯು ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾಗದಿದ್ದರೆ ನಿರಾಶರಾಗಬಾರದು. ಅವರು ಪುನಃ ಪ್ರಯತ್ನಶೀಲನಾಗಿ ಶ್ರಮವಹಿಸಿ ಗೆಲುವನ್ನು ಪಡೆಯಬೇಕೆಂದು ಕಿವಿ ಮಾತು ಹೇಳಿದರು. ಇಂದು ಜಗತ್ತಿನ ಎಲ್ಲ ರಂಗದಲ್ಲಿ ಮಹಿಳೆಯು ತನ್ನ ಪ್ರತಿಭೆಯನ್ನು ವ್ಯಕ್ತಪಡಿಸುತ್ತಿದ್ದಾಳೆ. ತೊಟ್ಟಿಲು ತೂಗುವ ಕೈ ದೇಶವನ್ನಾಳುತ್ತದೆ ಎಂಬ ಮಾತು ಸಮಕಾಲೀನ ಸಂದರ್ಭದಲ್ಲಿ ನಿಜವಾಗಿದೆ. ಇದರ ಜೊತೆಗೆ ಮನೆಯೆ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರು, ಜನನಿಯಿಂದ ಪಾಠ ಕಲಿತ ಜನರೇ ಧನ್ಯರು ಎಂಬ ಮಾತು ಅಕ್ಷರಶಃ ನಿಜ. ಸಮಾಜದಲ್ಲಿ ಬದುಕಲು ಸಾಕಷ್ಟು ಅವಕಾಶಗಳಿವೆ.
ಅವುಗಳನ್ನು ಪಡೆಯುವಲ್ಲಿ ವಿದ್ಯಾರ್ಥಿನಿಯರು ಸದೃಢರಾಗಿ ಮುನ್ನುಗ್ಗಬೇಕು ಎಂದರು.ಕರ್ನಾಟಕ ರಾಜ್ಯ ಖೋಖೋ ಸಮಿತಿಯ ಅಧ್ಯಕ್ಷರಾದ ಮತ್ತು ಇಂದು ನಡೆಯುವ ಆಯ್ಕೆ ಪ್ರಕ್ರಿಯೆಯ ಸದಸ್ಯರಾದ ಡಾ.ಎಚ್.ಎನ್. ಲೋಕೇಶ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟೊಮಟ್ಟದಲ್ಲಿ ಆಯ್ಕೆಯಾಗಿದ್ದವರಿಗೆ ಶೇಕಡಾ ಮೂರರಷ್ಟು ಕೇಂದ್ರ ಮತ್ತು ರಾಜ್ಯ ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಮೀಸಲಾತಿಯನ್ನು ಸರಕಾರವು ನೀಡುತ್ತಿದೆ. ಜೊತೆಗೆ ವಿದ್ಯಾರ್ಥಿ ವೇತನವನ್ನು ಸರಕಾರವು ನೀಡುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ಅಭಿಪ್ರಾಯಪಟ್ಟರು. ಈ ವೇಳೆ ಪ್ರಾಚಾರ್ಯ ಡಾ. ಎನ್.ಆರ್.ಸವತಿಕರ, ಐಶ್ವರ್ಯ ಗುಡೆನವರ, ಪ್ರೊ. ಕೆ. ರಾಮರೆಡ್ಡಿ, ವಿ.ಎಸ್.ಮೀಶಿ, ಎಮ್.ಎನ್.ಸಂಗೊಳ್ಳಿ, ಶಿವಾನಂದ ಹೊಳಿ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ 26ಕಾಲೇಜಿನಿಂದ ಆಗಮಿಸಿದ 74 ಸ್ಪರ್ಧಿಗಳು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಮಹಾವಿದ್ಯಾಲಯದ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 