ಇಂದು ಬೊಮ್ಮನಹಳ್ಳಿ ಗ್ರಾಪಂ ಕಾರ್ಯಾಲಯ ಉದ್ಘಾಟನೆ
Inauguration of Bommanahalli Gramm Office today
ತಾಳಿಕೋಟಿ 29: ತಾಲೂಕಿನ ದೇವರ ಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಬೊಮ್ಮನಹಳ್ಳಿ ಗ್ರಾಮ ಪಂಚಾಯತ್ ಇದರ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭ ಇಂದು ಜರುಗಲಿದೆ. ಬೆಳಿಗ್ಗೆ 11:00 ಘಂಟೆಗೆ ಜರುಗಲಿರುವ ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ತಾಳಿಕೋಟಿ ಶ್ರೀ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ದಲಿಂಗ ದೇವರು ವಹಿಸಲಿದ್ದಾರೆ. ದೇವರ ಹಿಪ್ಪರಗಿ ಮತಕ್ಷೇತ್ರ ಶಾಸಕ ಭೀಮನಗೌಡ (ರಾಜುಗೌಡ)ಬ.ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರು ಸಮಾರಂಭವನ್ನು ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಎಂ.ಖರ್ಗೆ ಅವರ ಘನ ಉಪಸ್ಥಿತಿ ಇರುವುದು.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್. ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಬಿ.ಹುಕ್ಕೇರಿ, ಕೆ ಎಸ್ ಡಿ ಎಲ್ ಅಧ್ಯಕ್ಷರು, ಶಾಸಕ ಸಿ. ಎಸ್.ನಾಡಗೌಡ ಅಪ್ಪಾಜಿ, ಸಂಸದ ರಮೇಶ ಚಂ.ಜಿಗಜಿಣಗಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ, ಎಂಎಲ್ಸಿ ಗಳಾದ ಹಣಮಂತ್ ಆರಿ್ನರಾಣಿ, ಸುನೀಲಗೌಡ ಬಿ ಪಾಟೀಲ,ಪಿ. ಎಚ್.ಪೂಜಾರ, ಕೇಶವ್ ಪ್ರಸಾದ್ ಎಸ್, ಕೌಶಲ್ಯಾಭಿವೃದ್ಧಿ ನಿ.ಅಧ್ಯಕ್ಷೆ ಕಾಂತಾ ನಾಯಕ್,ಕ.ಬಾ.ವಿ.ಅ. ಅಧ್ಯಕ್ಷ ಸಂಗಮೇಶ ಬಬಲೇಶ್ವರ,ಕ.ನಿಂ.ಅ.ಮಂ. ಅಧ್ಯಕ್ಷ ಬಿಎಸ್ ಕವಲಗಿ,ತಾ.ಗ್ಯಾ.ಅ.ಸ. ಅಧ್ಯಕ್ಷ ಸಂಗಮೇಶ ದೇಸಾಯಿ, ಗ್ರಾ.ಪಂ. ಅಧ್ಯಕ್ಷೆ ಸರೋಜಾಬಾಯಿ ಮ. ಮಸರಕಲ್ಲ, ಉಪಾಧ್ಯಕ್ಷೆ ಭರಮವ್ವ ಸಿ.ಕಾಳಗಿ ಆಗಮಿಸಲಿದ್ದಾರೆ.
ಅತಿಥಿಗಳಾಗಿ ಕ.ರಾ.ಗ್ರಾ.ಸಂ.ಸ.ಮ.ಒ. ರಾಜ್ಯಾಧ್ಯಕ್ಷ ಸತೀಶ ಕಾಡಶೆಟ್ಟಿಹಳ್ಳಿ, ಬೂಧಾನಿ ತಿಮ್ಮವ್ವ ಯಮನಪ್ಪ ಮಸರಕಲ್ಲ,ವಿಶೇಷ ಸನ್ಮಾನಿತ ರಾಗಲಿರುವ ಬಸಮ್ಮ ಯಮನಪ್ಪ ಮಸರಕಲ್ಲ, ವಿಶೇಷ ಆಹ್ವಾನಿತರಾಗಿ ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಜಿಪಂ ಸಿಇಓ ರಿಷಿ ಆನಂದ,ಎಸ್.ಪಿ. ಲಕ್ಷ್ಮಣ ನಿಂಬರಗಿ,ಪ.ಪಂ. ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ,ತಾಪಂ ಇಓ ಅನಸೂಯಾ ಚಲವಾದಿ, ತಹಸಿಲ್ದಾರ್ ಡಾ.ವಿನಯಾ ಹೂಗಾರ, ಕೆ ಆರ್ ಐ ಡಿ ಎಲ್ ಎಇಇ ಆನಂದಸ್ವಾಮಿ ಹಾಗೂ ಬೊಮ್ಮನಹಳ್ಳಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿರುವರೆಂದು ಪಿಡಿಒ ಪ್ರಭು ಚೆನ್ನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 