ಕನ್ನಡ ಜಾನಪದ ಪರಿಷತ್ ತಾಲೂಕಾ ಮಹಿಳಾ ಘಟಕದ ಉದ್ಘಾಟನೆ
Inauguration of Kannada Folk Parishad Taluka Women's Unit
ಮುದ್ದೇಬಿಹಾಳ 07: ಜಾನಪದ ಸಾಹಿತ್ಯ, ಸಂಗೀತ, ಕಲೆ ಮತ್ತು ಸಂಸ್ಕೃತಿ ಮುಂದಿನ ಪೀಳಿಗೆಗೆ ವರ್ಗಾವಣೆಯಾಗುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಜಾನಪದ ಪರೀಷತ್ ರಾಜ್ಯಾಧ್ಯಕ್ಷ ಎಸ್ ಬಾಲಾಜಿ ಹೇಳಿದರು.
ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಮಂಗಳವಾರ ನಡೆದ ಕನ್ನಡ ಜಾನಪದ ಪರಿಷತ್, ಬೆಂಗಳೂರು ಇದರ ಮುದ್ದೇಬಿಹಾಳ ತಾಲೂಕಾ ಮಹಿಳಾ ಘಟಕದ ಉದ್ಘಾಟನೆ, ಪದಾಧಿಕಾರಿಗಳಿಗೆ ಪದಪತ್ರ ಪ್ರದಾನ ಹಾಗೂ ಜಾನಪದ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ದ್ವಂಧ ಹಾಗೂ ಅಶ್ಲೀಲ ಹಾಡುಗಳನ್ನು ಜನಪದ ಎಂದು ಬಿಂಬಿಸಿ ಹೊಸ ಪೀಳಿಗೆಗಳಿಗೆ ತಪ್ಪು ಸಂದೇಶ ನೀಡುತ್ತಿರುವುದು ಸಮಾಜಘಾತಕ ಕ್ರಮ, ಇದಕ್ಕೆ ಸರ್ಕಾರ ಕೂಡಲೇ ಕಡಿಯೋಣ ಹಾಕಬೇಕೆಂದರು. ಜಾನಪದ ಸಾಹಿತ್ಯ ಮತ್ತು ಸಂಗೀತಕ್ಕೆ ಮಾನವನನ್ನು ಉತ್ತಮ ನಾಗರಿಕನನ್ನಾಗಿ ರೂಪಿಸುವ ಶಕ್ತಿ ಇದೆ. ಸಮಾಜದ ಅಂಕುಡೊಂಕು ತಿದ್ದುವ ಶಕ್ತಿ ಜಾನಪದಕ್ಕಿದೆ ಎಂದರು. ಈ ನಿಟ್ಟಿನಲ್ಲಿ ಈಗಾಗಲೇ ಪರಿಷತ್ತಿನ ಮಹಿಳಾ ಘಟಕಗಳನ್ನು ರಾಜ್ಯದಲ್ಲೆಡೆ ಅಸ್ಥಿತ್ವಕ್ಕೆ ತರಲಾಗಿದೆ. ಅದರಂತೆ ಮುದ್ದೇಬಿಹಾಳ ತಾಲೂಕಾ ಮಹಿಳಾ ಘಟಕ ಉದ್ಘಾಟನೆಗೊಳ್ಳುತಿದೆ.
ಈ ವೇಳೆ ಕಾಂಗ್ರೇಸ್ ಮುಖಂಡರು, ಅಸ್ಕಿ ಪೌಂಡೇಶನ್ ಅಧ್ಯಕ್ಷ ಸಿ ಬಿ ಅಸ್ಕಿ ಮಾತನಾಡಿ ನಮ್ಮ ಪೂರ್ವಜರಿಂದ ಬಂದ ಜನಪದವನ್ನು ನಾವುಗಳು ಉಳಿಸಿಕೊಂಡ ಹೋಗಬೇಕಾಗಿದೆ, ಇಂದು ಉತ್ತರ ಕರ್ನಾಟಕದ ಹೆಸರು ಹೇಳಿಕೊಂಡು ಅಶ್ಲೀಲ ಜಾನಪದ ಹಾಡುಗಳನ್ನು ಹಾಡುವದು ತಡೆಯಲು ವೇದಿಕೆಗಳು ನಿರ್ಮಾಣವಾಗುತ್ತಿರುವದು ಒಳ್ಳೆಯ ಕಾರ್ಯ, ಜನಪದಗೋಸ್ಕರ ಮಹಿಳಾ ಸಮ್ಮೇಳನ ಮಾಡಿದರೆ ನಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು.
ಕಾಂಗ್ರೇಸ್ ಮಹಿಳಾ ಮುಖಂಡರಾದ ಸಂಗೀತಾ ನಾಡಗೌಡ ಮಾತನಾಡಿ ಇಂದಿನ ಯುವ ಜಾನಪದ ಹೆಸರಿನಲ್ಲಿ ಅಶ್ಲೀಲತೆಯ ಕಡೆಗೆ ಯುವ ಸಮೂಹ ಜಾರುತ್ತಿರುವುದು ದುರಂತದ ಸಂಗತಿ, ಅಶ್ಲೀಲ ಹಾಡುಗಳನ್ನು ಹಾಡುವ ಗಾಯಕರನ್ನು ಕರೆಸಿ ವೈಭವಿಕರಿಸುತ್ತಿರುವ ಸಮಾಜದ ವಿರುದ್ದ ಹರಿಹಾಯ್ದ ಅವರು ಭೂತಾಯಿಗೆ ಹೆಣ್ಣು ಎಂದು ಸಂಭೋಧಿಸುವ ಜನರು ಆ ಹೆಣ್ಣಿನ ಹೆಸರಿನಲ್ಲಿ ಅಶ್ಲೀಲತೆಯ ಹಾಡುಗಳನ್ನು ಸಾಹಿತ್ಯ ಮಾಡಿ ಹಾಡುವರ ಮನೆಯಲ್ಲಿ ಹೆಣ್ಣು ಮಕ್ಕಳು ಇರುವದಿಲ್ಲವೇ? ಎಂದು ಪ್ರಶ್ನೆ ಮಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿಜಯಪುರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಣಿ ಬಿರಾದಾರ ವಹಿಸಿ ಮಾತನಾಡಿ, ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯಿಂದ ಜಾನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಹೊಸ ಚೈತನ್ಯ ಸಿಗಲಿದೆ ಎಂದರು.ಬಾಗಲಕೋಟ ಜಿಲ್ಲಾ ಅಧ್ಯಕ್ಷ ಡಿ.ಎಂ. ಸಾವಕಾರ ಅವರು ತಾಲ್ಲೂಕಾ ಮಹಿಳಾ ಘಟಕದ ವಿವಿಧ ಪದಾಧಿಕಾರಿಗಳಿಗೆ ಪದಪತ್ರಗಳನ್ನು ಪ್ರದಾನ ಮಾಡಿದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಂಡಲೀಕ ಯ. ಮುರಾಳ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿಜಯಪುರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಣಿ ಬಿರಾದಾರ ವಹಿಸಿ ಮಾತನಾಡಿ, ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯಿಂದ ಜಾನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಹೊಸ ಚೈತನ್ಯ ಸಿಗಲಿದೆ ಎಂದರು.ಬಾಗಲಕೋಟ ಜಿಲ್ಲಾ ಅಧ್ಯಕ್ಷ ಡಿ.ಎಂ. ಸಾವಕಾರ ಅವರು ತಾಲ್ಲೂಕಾ ಮಹಿಳಾ ಘಟಕದ ವಿವಿಧ ಪದಾಧಿಕಾರಿಗಳಿಗೆ ಪದಪತ್ರಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕಾ ಮಹಿಳಾ ಘಟಕದ ಅಧ್ಯಕ್ಷೆ ದೀಪರತ್ನಶ್ರೀ ಆಲೂರ ಸೇರಿದಂತೆ ಗೌರವ ಅಧ್ಯಕ್ಷರು, ಸಂಚಾಲಕರು, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಜಂಟಿ ಕಾರ್ಯದರ್ಶಿ ಸೇರಿದಂತೆ ವಿವಿಧ ಪದಾಧಿಕಾರಿಗಳಿಗೆ ಪದಪತ್ರಗಳನ್ನು ಪ್ರದಾನ ಮಾಡಲಾಯಿತು.
ಜಾನಪದ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಜಾನಪದ ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ತಾಲೂಕಾ ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪ್ರತಿಭಾ ಅಂಗಡಗೇರಿ, ಎ ಆರ್ ಮುಲ್ಲಾ, ಸಂಗಣ್ಣ ಕಂಚಾಣಿ, ಅಶ್ವೀನಿ ಬಿರಾದಾರ, ಚೈತನ್ಯ ಮುದ್ದೇಬಿಹಾಳ ಸೇರಿದಂತೆ ಹಲವರು ಇದ್ದರು. ಜಿಲ್ಲಾಧ್ಯಕ್ಷ ಪುಂಡಲೀಕ ಮುರಾಳ ಪ್ರಾಸ್ಥಾವಿಕವಾಗಿ ಮಾತನಾಡಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 