ಹೊಸ ಕನ್ನಡ ಪ್ರಾಥಮಿಕ ಶಾಲೆ ಉದ್ಘಾಟನೆ: ಗ್ರಾಮೀಣ ಶಿಕ್ಷಣಕ್ಕೆ ಮತ್ತೊಂದು ಉತ್ತೇಜನ

ಹೊಸ ಕನ್ನಡ ಪ್ರಾಥಮಿಕ ಶಾಲೆ ಉದ್ಘಾಟನೆ: ಗ್ರಾಮೀಣ ಶಿಕ್ಷಣಕ್ಕೆ ಮತ್ತೊಂದು ಉತ್ತೇಜನ  Inauguration of New Kannada Primary School: Another Boost to Rural Education

ಲೋಕದರ್ಶನ ವರದಿ 

           ಯಮಕನಮರಡಿ 03 : ನರಸಿಂಗಪೂರ ಗ್ರಾಮದಲ್ಲಿ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಪ್ರಾಥಮಿಕ ಕನ್ನಡ ಶಾಲೆಯ ಉದ್ಘಾಟನಾ ಸಮಾರಂಭವನ್ನು ದಿನಾಂಕ 30ರಂದು ನೆರವೇರಿಸಲಾಯಿತು.  ಕಾರ್ಯಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಅಣ್ಣಾಜಾರಕಿಹೊಳಿ ಅವರು ಉದ್ಘಾಟಿಸಿದರು. ಅವರು ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣದ ಅಭಿವೃದ್ಧಿಗೆ ಸರ್ಕಾರಿ ಹಾಗೂ ಜನಪ್ರತಿನಿಧಿಗಳ ಸಹಕಾರ ಅತ್ಯಗತ್ಯವಾಗಿದ್ದು, ಮೂಲಸೌಕರ್ಯಗಳ ಅಭಿವೃದ್ಧಿಗೆ ನಿರಂತರ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

        ಶಾಲಾ ಕಟ್ಟಡ ನಿರ್ಮಾಣಕ್ಕೆ ನೀಡಲಾದ ಅನುದಾನವನ್ನು ಸಮರ​‍್ಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶಿಕ್ಷಣ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದರು.  ಈ ಸಂದರ್ಭದಲ್ಲಿ ಜಂಗ್ಲಿ ಸಾಹೇಬ ನಾಗವೇಂದ್ರ ನಾಯಕ್, ನರಸಿಂಗಪೂರ ಗ್ರಾಮ ಮುಖಂಡರು ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಹೊಸ ಶಾಲೆಯ ಉದ್ಘಾಟನೆಯೊಂದಿಗೆ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಹೊಸ ಚೈತನ್ಯ ದೊರಕಿದೆ ಎಂದು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದರು.