ಜಿಲ್ಲಾಧಿಕಾರಿ ಆವರಣದಲ್ಲಿ ಸಾರ್ವಜನಿಕ ಸ್ಯಾನಿಟೈಜರ್ ಸ್ಪ್ರೇ ಘಟಕ ಉದ್ಘಾಟನೆ

ವಿಜಯಪುರ 13: ನಗರದ ಜಿಲ್ಲಾಧಿಕಾರಿಗಳ ಕಾಯರ್ಾಲಯದ ಆವರಣದಲ್ಲಿ ಸ್ಥಾಪಿಸಲಾದ ಸಾರ್ವಜನಿಕ ಸ್ಯಾನಿಟೈಜರ್ ಸ್ಪ್ರೇ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ದೇವಾನಂದ ಚವ್ಹಾಣ, ಸೋಮನಗೌಡ ಪಾಟೀಲ (ಸಾಸನೂರ) ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಜೆ.ರವಿಶಂಕರ, ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ಇನ್ನಿತರರು ಇದ್ದರು.