“ಮಹಿಳೆಯರ ವೃತ್ತಿ ಶಿಕ್ಷಣಕ್ಕೆ ನವ ದೃಷ್ಟಿಕೋನ” ಕುರಿತ ಒಂದು ದಿನದ ಉದ್ಘಾಟನೆ
Inauguration of a one-day conference on “New Perspectives on Women’s Vocational Education”
ವಿಜಯಪುರ 02: ಮಹಿಳೆಯರು ಸಾಂಪ್ರದಾಯಿಕ ಉದ್ಯೋಗಗಳ ಗಡಿಯನ್ನು ಮೀರಿ ಹೊಸ ವೃತ್ತಿ ಕ್ಷೇತ್ರಗಳಲ್ಲಿ ಮುನ್ನಡೆಯಲು ವೃತ್ತಿಪರ ಶಿಕ್ಷಣ ಮತ್ತು ಪಾಠವಿಧಾನಗಳನ್ನು ಕಾಲಾನುಗುಣವಾಗಿ ನವೀಕರಿಸುವುದು ಅಗತ್ಯವೆಂದು ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರೊ. ಈಶ್ವರ್ ಪಿ. ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶ ಸಹಯೋಗದಲ್ಲಿ ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯದ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಪಿಎಂ ಉಷಾ ಮತ್ತು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಪರಿಷತ್ತಿನ ಅಡಿಯಲ್ಲಿ “ಮಹಿಳೆಯರ ವೃತ್ತಿ ಶಿಕ್ಷಣಕ್ಕೆ ನವ ದೃಷ್ಟಿಕೋನ” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಸಬಲೀಕರಣಕ್ಕೆ ವೃತ್ತಿಪರ ಶಿಕ್ಷಣ ಪ್ರಮುಖ ಸಾಧನವಾಗಿದೆ.
ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಉದ್ಯೋಗ ಮಾರುಕಟ್ಟೆಗೆ ಅನುಗುಣವಾಗಿ ಪಾಠವಿಧಾನಗಳನ್ನು ಮರು ವಿನ್ಯಾಸಗೊಳಿಸುವ ಅಗತ್ಯವಿದೆ. ಮಹಿಳೆಯರು ಕೇವಲ ಸಾಂಪ್ರದಾಯಿಕ ಉದ್ಯೋಗಗಳಿಗೆ ಸೀಮಿತರಾಗದೆ ಹೊಸ ವೃತ್ತಿ ಕ್ಷೇತ್ರಗಳಲ್ಲಿ ಅವಕಾಶ ಪಡೆದುಕೊಳ್ಳಬೇಕು ಎಂದರು. ಮತ್ತೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರು ಯುನಿವರ್ಸಿಟಿ ಆಫ್ ಪೀಪಲ್ ಸಹ ಪ್ರಾಧ್ಯಪಕ ಡಾ. ಆಕಾಶ್ ಸಿ.ಎಂ ಮಾತನಾಡಿ, ಭವಿಷ್ಯದ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಡೇಟಾ ಸೈನ್ಸ್, ಡಿಜಿಟಲ್ ಇನೋವೇಷನ್ ಮೊದಲಾದ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿದಾಗಲೇ ನಿಜವಾದ ಸಮಾನತೆ ಸಾಧ್ಯ ಎಂದರು.ಕಾರ್ಯಕ್ರಮದ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶ ಸಂಯೋಜಕ ಡಾ. ಸಿ ಎಂ ಮಠಪತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಾಗಾರದಲ್ಲಿ ವಾಣಿಜ್ಯ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯರು ಪ್ರಾಧ್ಯಾಪಕರು ಮತ್ತಿತರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 