ಗೋಜನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
Inauguration of a pure drinking water unit at Gojanur Government High School
ಲಕ್ಷ್ಮೇಶ್ವರ" 22: ಗೋಜನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಡಾ. ಚಂದ್ರು ಲಮಾಣಿ ಅವರು ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ ಅವರು, ಶಾಲೆಯ ವಿದ್ಯಾರ್ಥಿಗಳ ಉತ್ತಮ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಘಟಕವನ್ನು ಸದ್ಬಳಕೆ ಮಾಡಿಕೊಂಡು, ಅದನ್ನು ಸುರಕ್ಷಿತವಾಗಿ ಸಂರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಗೋಜನೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಂಜುನಾಥ್ ಚಲವಾದಿ, ಉಪಾಧ್ಯಕ್ಷ ಮಹಾಂತಗೌಡ ಪಾಟೀಲ್, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್ ಕಣವಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಗುರುಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
ಶಾಲೆಯ ಶಿಕ್ಷಕಿ ಗೀತಾ ಪೂಜಾರಿ, ಎಂ.ಬಿ. ತಳ್ಳಳ್ಳಿ, ಎಡಿ ಕುಲಕರ್ಣಿ, ಎಡಿ ಬುಡ್ಡೇಶನವರ, ಪ್ರಕಾಶ್ ಕೆಳಗಡಿ, ಶಶಿಧರ್ ಹೂಗಾರ, ರಾಜೇಶ್ವರ ಅಣವೇಕರ್, ಹೆಚ್.ಬಿ. ಮೇಟಿ, ಎಂ.ಕೆ. ಮೇಲಿನಮನಿ, ಪಿಎಸ್ ವನಹಳ್ಳಿ, ಅನಿಲಕುಮಾರ್, ಆರ್.ಎಂ. ಗದಗಿನ, ಬಸವರಾಜ್ ಚಕ್ರಸಾಲಿ, ಗಂಗಾಧರ ಮೆಣಸಿನಕಾಯಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 