ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
Inauguration of cultural and sports activities
ಲೋಕದರ್ಶನ ವರದಿ
ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
ಮಾಂಜರಿ 16: ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆಎಲ್‌ಇ ಸಂಸ್ಥೆಯ ಎಸ್. ಸಿ. ಪಾಟೀಲ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಸನ್ 2026 27ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜರುಗಿತು.
ಅಧ್ಯಕ್ಷತೆಯನ್ನು ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯ ಕುಮಾರ ಶಂ. ಕೋರೆ ಮತ್ತು ಅತಿಥಿಗಳಾಗಿ ಮುನವಳ್ಳಿ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಪ್ರೊ. ಬಿ. ಜಿ. ಜಾವೂರ ಇವರು ಆಗಮಿಸಿ ಮಕ್ಕಳು ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ವಿದ್ಯಾರ್ಥಿಯ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಶಾಲೆಯ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯ ಅಣ್ಣಾಸಾಹೇಬ ಈ. ಜಕಾತೆ ಇವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಮಕ್ಕಳು ಪಠ್ಯ ಚಟುವಟಿಕೆಗಳೊಂದಿಗೆ ಸಹ ಪಠ್ಯ ಚಟುವಟಿಕೆಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಯಶಸ್ವಿಗೊಳಿಸಿಕೊಳ್ಳಬೇಕೆಂದು ಮಕ್ಕಳಿಗೆ ತಿಳಿ ಹೇಳಿದರು.
ತುಕಾರಾಮ ಭೀ. ಪಾಟೀಲ ವಿಶ್ವನಾಥ ಸಾ. ನಷ್ಠೆ ಹಾಗೂ ಎಸ್. ಎಸ್. ಕೆ ಪ್ರೌಢ ಶಾಲೆಯ ಉಪಪ್ರಾಚಾರ್ಯ ಜೆ. ಎಸ್. ತಮಗೊಂಡ ಆಜೀವ ಸದಸ್ಯರಾದ ಬಿ. ಎಸ್. ಅಂಬಿ ಪ್ರಾಚಾರ್ಯ ಪಿ. ಎನ್. ತಳವಾರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಂ. ಎಸ್. ಕಾನಡೆ, ಕೆ. ಎಂ. ಹಳಿಂಗಳಿ ಉಪಸ್ಥಿತರಿದ್ದರು. ಶಾಲಾ ಪ್ರಧಾನ ಗುರು ಎಸ್. ಜಿ. ಹಿರೇಮಠ ಸ್ವಾಗತಿಸಿದರು ದಿವ್ಯಾ ಆಗೇರ ವಂದಿಸಿದರು. ಎಸ್. ಜೆ. ಕೂಗೆ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 