ಸುರಭಿ ನಗರದಲ್ಲಿ ಬಾಳೇಹೊನ್ನೂರು ಶಾಖಾ ಮಠ ಕಟ್ಟಡಕ್ಕೆ ಚಾಲನೆ
Inauguration of the Balehonnur branch math building in Surabhi Nagar
ವಿಜಯಪುರ 21: ಧರ್ಮ, ಸಂಸ್ಕೃತಿ, ಸಂಸ್ಕಾರ ಹಾಗೂ ಸಮಾಜ ಸೇವೆಯ ಹೊಸ ಅಧ್ಯಾಯಕ್ಕೆ ಮಠಗಳು ನಾಂದಿ ಹಾಡುತ್ತಿವೆ. ಧಾರ್ಮಿಕ ದರ್ಶನ ನೀಡುವುದರ ಜತೆಗೆ ಯುವಜನರಲ್ಲಿ ಸಂಸ್ಕಾರ ಮತ್ತು ಧರ್ಮಪ್ರಜ್ಞೆ ಬೆಳೆಸುವ ಕೇಂದ್ರಗಳಾಗಿ ಮಠಗಳು ಕಾರ್ಯನಿರ್ವಹಿಸುತ್ತಿವೆ ಎಂದು ಬಾಳೇಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ನಗರದ ಸುರಭಿ ನಗರದಲ್ಲಿ ಸೋಮವಾರ ಬಾಳೇಹೊನ್ನೂರು ಶಾಖಾ ಮಠದ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಭೌತಿಕ ಅಭಿವೃದ್ಧಿಯ ಜತೆಗೆ ನೈತಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ. ಯುವಜನರಲ್ಲಿ ರಾಷ್ಟ್ರ್ರಜ್ಞೆ ಹಾಗೂ ಧರ್ಮಪ್ರಜ್ಞೆ ಬೆಳೆಸುವ ಕಾರ್ಯಕ್ಕೆ ಮಠಗಳು ಮಾರ್ಗದರ್ಶಕ ಕೇಂದ್ರಗಳಾಗಬೇಕು ಎಂದರು. ಶಾಖಾ ಮಠದ ಕಟ್ಟಡದ ಪ್ರತಿಯೊಂದು ಕಲ್ಲು ಧರ್ಮಸೇವೆಯ ಸಂಕಲ್ಪಕ್ಕೆ ಸಾಕ್ಷಿಯಾಗಲಿ.
ಮಠದಿಂದ ಹೊರಹೊಮ್ಮುವ ಪ್ರತಿಯೊಂದು ಸಂದೇಶವೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸದಾಚಾರ ಬೆಳೆಸುವಂತಾಗಲಿ ಎಂದು ಆಶಿಸಿದರು. ಧರ್ಮದ ಮೌಲ್ಯಗಳು ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಶ್ವಬಂಧುತ್ವದ ಚಿಂತನೆಗಳು ಜನಮನ ತಲುಪಲಿ. ಒಂದು ವರ್ಷದೊಳಗೆ ಶಾಖಾ ಮಠದ ಕಟ್ಟಡ ಕಾಮಗಾರಿ ಪೂರ್ಣಗೊಂಡು ಲೋಕಾರೆ್ಣಯಾಗಲಿ ಎಂದು ಶುಭ ಹಾರೈಸಿದರು. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮಾತನಾಡಿ, ಸುರಭಿ ನಗರದಲ್ಲಿ ಬಾಳೇಹೊನ್ನೂರು ಶಾಖಾ ಮಠದ ಕಟ್ಟಡವನ್ನು ಸುಮಾರು 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದರು. ಆಳವೇಳ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಭಕ್ತರು ಪಾಲ್ಗೊಂಡಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 