ಬೆಳಗಾವಿ, 16: ನಾಯಕತ್ವ ಗುಣ ಮತ್ತು ರಾಷ್ಟ್ರೀಯ ಸೇವಾ ಮನೋಭಾವ ಬೆಳಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಾಯಕಾರಿಯಾಗಿದೆ ಎಂದು ಬೆಳಗಾವಿಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿದರ್ೇಶಕರಾದ ಆರ್ ಎನ್ ಪಟ್ಟಣಶೆಟ್ಟಿ ಅವರು ಹೇಳಿದರು.
ಶಹಾಪೂರದ ಸಕರ್ಾರಿ ಚಿಂತಾಮಣರಾವ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸೆ.14 ರಿಂದ ಸೆ. 20 ರವರೆಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನಾ ವಾಷರ್ಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶಿಬಿರಾಥರ್ಿಗಳು ಏಳು ದಿನ ಶಿಬಿರದ ಸಂಪೂರ್ಣ ಸದುಪಯೋಗ ಪಡಿಸಿಕೊಂಡು ಸಧೃಡ ರಾಷ್ಟ್ರ ನಿಮರ್ಾಣಕ್ಕೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾದ ಸಕರ್ಕಾ ರಿ ಸರಸ್ವತಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಬಿ.ವೈ. ಹನ್ನೂರ ಮಾತನಾಡಿ, ಶಿಬಿರಾಥರ್ಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವನ್ನು ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಕಾಕತಿ ಗ್ರಾಮ ಪಂಚಾಯತ ಸದಸ್ಯರಾದ ರಾಮಾ. ಕೆ. ಕಡೋಲಕರ, ಶಹಾಪೂರ ಸಕರ್ಾರಿ ಚಿಂತಾಮಣರಾವ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಭಾರತಿ.ವ್ಹಿ.ವಾಲಿ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಜ್ಯೋತಿ.ಸಿ.ಎಂ ಹಾಗೂ ಸಹಾಯಕ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಎಸ್.ಎಸ್.ಹಿರೇಮಠ ಉಪಸ್ಥಿತರಿದ್ದರು