ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ
Inauguration of the new building of the cooperative society
ಚಿಕ್ಕೋಡಿ 22: ಗಡಿ ಭಾಗದ ಚಿಕ್ಕೋಡಿ- ಸದಲಗಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವೇಗ ನೀಡಿದ್ದು. ಕ್ಷೇತ್ರದಲ್ಲಿ ರಸ್ತೆ, ದೇವಾಲಯ, ನದಿ ಘಾಟ್ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಿಗೆ ಆಧ್ಯತೆ ನೀಡಲಾಗಿದೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.ಇಂಗಳಿ ಗ್ರಾಮದ ಕೃಷ್ಣಾ ನದೀತೀರದಲ್ಲಿ ನಿರ್ಮಾಣಗೊಳ್ಳುತ್ತಿರುವ ಘಾಟ್ ಕಾಮಗಾರಿಯ ಉದ್ಘಾಟನೆ ಹಾಗೂ 36 ಲಕ್ಷ ರೂ ಅನುದಾನದಲ್ಲಿ ನಿರ್ಮಾಣವಾದ ಇಂಗಳಿ ಗಾವಠಾಣ ನ ಮಹಾಲಕ್ಷ್ಮೀ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆಯ ನಂತರ, ಬಸವೇಶ್ವರ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ್ಕ್ಣಿ್ಣೂಳ್ತ್ಘ್ದು.ಸ್ತ್ಲೂ್ಯೂಳ್ತಹ್ಠಿ್ಚ್ಣುಷ್ಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಭಾಗವಾಗಿ, ನನ್ನ ಹಾಗೂ ಶಾಸಕ ಗಣೇಶ ಹುಕ್ಕೇರಿ ಪ್ರಯತ್ನಗಳ ಫಲವಾಗಿ ಇಂಗಳಿ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ?22.11 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಇಂಗಳಿ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ ?50 ಲಕ್ಷ ಅನುದಾನ ಮಂಜೂರು ಮಾಡಲಾಗಿದ್ದು,
ಈ ಮೂಲಕ ದೇವಾಲಯಕ್ಕೆ ಒಟ್ಟು ?1.10 ಕೋಟಿ ಅನುದಾನ ಲಭ್ಯವಾಗಿದೆ. ಮರಾಠಾ ಸಮಾಜ ಭವನದ ಉಳಿದ ಕಾಮಗಾರಿಗಳಿಗೆ ?1.20 ಕೋಟಿ ಅನುದಾನ ಮಂಜೂರಾಗಿದೆ. ಅಲ್ಲದೆ, ಶ್ರೀ ಬೀರೇಶ್ವರ ದೇವಾಲಯದ ಬಳಿಯ ಮಂಟಪ ನಿರ್ಮಾಣಕ್ಕೆ ?5 ಲಕ್ಷ ಹಾಗೂ ಶ್ರೀ ರಾಮಲಿಂಗ ದೇವಾಲಯದ ಕಟ್ಟಡ ಕಾಮಗಾರಿಗೆ ?29 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ?5 ಲಕ್ಷ ಕೊಡುಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.ಕೃಷ್ಣಾ ನದೀತೀರದ ಘಾಟ್ ನಿರ್ಮಾಣ ಯೋಜನೆಗೆ ?2.50 ಕೋಟಿ ಹಾಗೂ ಇಂಗಳಿಯ ಬಹುಉದ್ದೇಶೀಯ ಗ್ರಾಮೀಣ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಯ ಎರಡನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ?20 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಪ್ರಕಾಶ ಹುಕ್ಕೇರಿ ವಿವರಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪಾಟೀಲ ಸೇರಿದಂತೆ ಪಾಂಡುರಂಗ ಮಾನೆ, ಅಶೋಕ್ ಹಾವಳೆ, ಅಪ್ಪಾಸಾಹೇಬ ಜತ್ರಾಟೆ, ಗಣಪತಿ ಧನವಡೆ, ಸಿದ್ರಾಮ ಶೇಳಕೆ, ಚಂದ್ರಕಾಂತ್ ಪಾಟೀಲ, ಬಾಳು ಧನಗರ, ಸಂಜಯ ನರವಾದೆ, ಮಚ್ಚೀಂದ್ರ ಧನಗರ, ಸಮಶೇರ್ ಮತ್ತೇಭಾಯಿ, ಬಾಳಾಸಾಹೇಬ ಧಯಾರಕರ, ಡಾ. ಅಜಿತ್ ಚಿಗರೆ, ಶಿವಾನಂದ ಕರೋಷಿ ಹಾಗೂ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 