ವಲಯ ಮಟ್ಟದ ಇಲಾಖಾ ಕ್ರೀಡಾಕೂಟ ಉದ್ಘಾಟಿನೆ
Inauguration of the zonal level departmental sports meet
ವಲಯ ಮಟ್ಟದ ಇಲಾಖಾ ಕ್ರೀಡಾಕೂಟ ಉದ್ಘಾಟಿನೆ
ರಾಯಬಾಗ, 07 ; ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ಆದರ್ಶ ಶಿಕ್ಷಣ ಸಂಸ್ಥೆ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು.
ಗುರುವಾರ ತಾಲೂಕಿನ ಬಾವನ ಸವದತ್ತಿ ಗ್ರಾಮದ ಬಾಜೀರಾವ ಮಗದುಮ್ಮ ಪ್ರೌಢ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಬಾವನ ಸವದತ್ತಿ ವಲಯ ಮಟ್ಟದ ಇಲಾಖಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧಾ ಮನೋಭಾವದಿಂದ ಆಟ ಪ್ರದರ್ಶಿಸಬೇಕು. ನಿರ್ಣಾಯಕರು ಯಾವುದೇ ತಾರತಮ್ಯ ಮಾಡದೆ ಸರಿಯಾದ ನಿರ್ಣಾಯ ನೀಡಬೇಕೆಂದರು.ಸಂಸ್ಥೆಯ ಅಧ್ಯಕ್ಷರು ಆಯ್. ಡಿ. ಪಾಟೀಲ, ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜೆ ಎಂ ಮಗದುಮ್ಮ, ಕಾರ್ಯದರ್ಶಿ ಎ ಟಿ ಕೂಗೆ, ಸದಸ್ಯರಾದ ಎಡಿ ಜನಾಜ, ಬಿಜೆ ಜನಾಜ, ಎಜೆ ಕಾಮಗೌಡ, ಕೆಜೆ ಕಾಮಗೌಡ, ಮುಖ್ಯಾಧ್ಯಪಕರಾದ ಎಕೆ ಸಲಗರೆ, ಎಸ್‌ಬಿ ಬೆನಾಡೆ ಹಾಗೂ ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು. ಶಿಕ್ಷಕ ಡಿಆರ್ ಭೇಠಡೆ ಸ್ವಾಗತಿಸಿದರು. ಅಕ್ಷತಾ ಸಮಾಜೆ ನಿರೂಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 