ಮಹಾರಾಷ್ಟ್ರ ಮಾದರಿಯಲ್ಲಿ ಮೀಸಲಾತಿ ಹೆಚ್ಚಿಸಿ

ಬೆಂಗಳೂರು 28: ಪರಿಶಿಷ್ಟ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ಹೆಚ್ಚಳ ಸಂಬಂಧ ಸಮಿತಿ ರಚಿಸಲಾಗುತ್ತಿದ್ದು, ಸಮಿತಿ ನೀಡುವ ವರದಿ ಆಧಾರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಖಾತೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

 ವಿಧಾನಸೌಧದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು,  ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರವನ್ನು  ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಿದ್ದೇನೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆನಡೆಸಿದ್ದು, ಪಕ್ಷದ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. 

   ಮತ್ತೊಂದು ಸಮುದಾಯದಲ್ಲಿರುವ  ಮೀಸಲಾತಿಯಿಂದ ವಾಲ್ಮೀಕಿ ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ಕೊಡಿ ಎಂದು ಕೇಳುತ್ತಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಹೆಚ್ಚಿನ ಮೀಸಲಾತಿ ಕೊಡುವುದಕ್ಕೆ ಅವಕಾಶವಿದೆ. ಈಗಾಗಲೇ ಮಹಾರಾಷ್ಟ್ರದಲ್ಲೂ ಶೇ.50ಗಿಂತ ಅಧಿಕ ಮೀಸಲಾತಿ ಕೊಟ್ಟಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿಯೂ ಮೀಸಲಾತಿ ಹೆಚ್ಚಿಸಬೇಕು. ಹೀಗಾಗಿ ಮೀಸಲಾತಿ ಸಂಬಂಧ ಸರ್ಕಾರ  ಸಮಿತಿ ರಚಿಸಬೇಕು. ಸಮಿತಿ ಮೀಸಲಾತಿ ಸಂಬಂಧ ಸಮಗ್ರ ಅಧ್ಯಯನ ನಡೆಸಿ ವರದಿ ನೀಡುತ್ತದೆ. ಅದರ ಆಧಾರದ ಮೇಲೆ ಮುಂದಿನ ನಿರ್ಧಾರ  ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.