ಪಟ್ಟಣದಲ್ಲಿ ಹೆಚ್ಚಾದ ಬೀದಿ ನಾಯಿಗಳ ಉಪಟಳ
Increased number of stray dogs in the city
ಪಟ್ಟಣದಲ್ಲಿ ಹೆಚ್ಚಾದ ಬೀದಿ ನಾಯಿಗಳ ಉಪಟಳ
ರಾಯಬಾಗ, 28 ; ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಿದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತಯವರು ಗುರುವಾರ ಸುಮಾರು 200 ಕ್ಕೂ ಅಧಿಕ ಬೀದಿ ನಾಯಿಗಳನ್ನು ಹಿಡಿದು ಸುರಕ್ಷಿತ ಪ್ರದೇಶಕ್ಕೆ ಸಾಗಿಸಿದ್ದಾರೆ. ಇತ್ತೀಚಿಗೆ ಪಟ್ಟಣದ ಅನೇಕ ಬೀದಿಗಳಲ್ಲಿ ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದ್ದವು, ಇದರಿಂದ ಅನೇಕ ಮಕ್ಕಳು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬೀದಿ ನಾಯಿಗಳ ತೊಂದರೆಯಿಂದ ಬೇಸತ್ತ ಪಟ್ಟಣದ ಸಾರ್ವಜನಿಕರು ಪಟ್ಟಣ ಪಂಚಾಯತಗೆ ಅನೇಕ ಬಾರಿ ಮನವಿ ಮಾಡಿಕೊಂಡಿದ್ದರು.
ಗುರುವಾರ ಪಟ್ಟಣ ಪಂಚಾಯತ ಪೌರಕಾರ್ಮಿಕರು ಬೀದಿ ನಾಯಿಗಳನ್ನು ಹಿಡಿದು, ವಾಹನದಲ್ಲಿ ಸಾಗಿಸಿದ್ದಾರೆ. ಇನ್ನುಳಿದ ಎಲ್ಲ ಬೀದಿಗಳನ್ನು ಕಾರ್ಯಾಚರಣೆ ನಡೆಸಿ ಹಿಡಿಯಲಾಗುವುದು ಎಂದು ಪ.ಪಂ. ಮುಖ್ಯಾಧಿಕಾರಿ ಎಸ್.ಆರ್.ಮಾಂಗ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 