ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಆಗ್ರಹಿಸಿ ಅನಿರ್ದಿಷ್ಟ ಅವಧಿ ಮುಷ್ಕರ
Indefinite strike demanding permanent employment of outsourced employees
ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಆಗ್ರಹಿಸಿ ಅನಿರ್ದಿಷ್ಟ ಅವಧಿ ಮುಷ್ಕರ
ಕೊಪ್ಪಳ 13: ರಾಜ್ಯದಲ್ಲಿರುವ ಎಲ್ಲ ಮಹಾನಗರ ಪಾಲಿಕೆ, ಪುರಸಭೆ ಹಾಗೂ ನಗರಸಭೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಿ ರಾಜ್ಯ ಸರ್ಕಾರಿ ನೌಕರರಿಗೆ ದೊರಕುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ಅನಿರ್ದಿಷ್ಟ ಅವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್ ಕಟ್ಟಿಮನಿ ತಿಳಿಸಿದ್ದಾರೆ.
ಪೌರ ನೌಕರರ ಬಲ ತೋಳಿಗೆ ಕಪ್ಪುಪಟ್ಟಿ ಧರಿಸುವ ಮೂಲಕ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದು ರಾಜ್ಯಾದ್ಯಂತ ಇಂದು ಕರ್ನಾಟಕ ಪೌರ ನೌಕರ ಸಂಘದಿಂದ ನಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ಆರಂಭಿಸಿದ್ದೇವೆ. ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಆಗಬಾರದು ಎಂಬ ಉದ್ದೇಶ ದಿಂದ ಯಾವುದೇ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸದೇ ಕಪ್ಪು ಬಟ್ಟೆ ಧರಿಸಿ ಮುಷ್ಕರ ಆರಂಭಿಸಿದ್ದೇವೆ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಿ ಅವರಿಗೆ ಕೆಜಿಐಡಿ, ಜಿಪಿಎಫ್, ಜ್ಯೋತಿ ಸಂಜೀವಿನಿ ಹಾಗೂ ಸು.25 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಟರ್ ಮ್ಯಾನ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕರು, ಬೀದಿ ದೀಪ ನಿರ್ವಹಣೆ ಕಾರ್ಮಿಕರು ಸೇರಿದಂತೆ ಇನ್ನಿತರ ಪೌರ ನೌಕರರನ್ನು ಗುತ್ತಿಗೆ ಪದ್ಧತಿಯಿಂದ ಮುಕ್ತಿಗೊಳಿಸಿ ಕಾಯಂಗೊಳಿಸಬೇಕು. ಇನ್ನು ಹತ್ತು ಹಲವು ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಯ ಮುಷ್ಕರ ಹಮ್ಮಿಕೊಂಡಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದೆ ಹೋದರೆ ಮುಂದಿನ 45 ದಿನಗಳಲ್ಲಿ ಬೇರೆ ಬೇರೆ ಹಂತದ ಹೋರಾಟಗಳನ್ನು ಆರಂಭಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಉಪಾಧ್ಯಕ್ಷ ಮಾರುತಿ ದೊಡ್ಡಮನಿ, ರಾಜ್ಯ ಪರಿಷತ್ ಸದಸ್ಯ ದುರ್ಗಪ್ಪ ಕಂದಾರಿ, ಶಾಖಾ ಅಧ್ಯಕ್ಷ ಮೈಲಪ್ಪ ಕಾರಟಗಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 