ಧಾರವಾಡ 01: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಮನಗಂಡು ವಿಶ್ವಸಂಸ್ಥೆ ರಾಜ್ಯದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಹಯೋಗದೊಂದಿಗೆ ಬಡತನ ನಿಮರ್ೂಲನೆ, ಉತ್ತಮ ಆರೋಗ್ಯ, ಒಳ್ಳೆಯ ಶಿಕ್ಷಣ, ನೀರು, ನಿರುದ್ಯೋಗ ಸಮಸ್ಯೆ ನಿವಾರಣೆ ಸೇರಿದಂತೆ 17 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸೂಚಿಸಿದೆ. ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆಯ ಮೂಲಕ ಮುಂದಿನ ವರ್ಷದಿಂದ ಅನುಷ್ಠಾನಗೊಳಿಸಲಾಗುವುದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಪ್ರಧಾನ ಆಯುಕ್ತ ಪಿಜಿಆರ್ ಸಿಂಧ್ಯಾ ತಿಳಿಸಿದರು.
ಇಂದು ಅವರು ಧಾರವಾಡದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು ಈ ಅಂಶಗಳ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಸಮಾಜದಲ್ಲಿ ಬದಲಾವಣೆ ತರಲಾಗುವುದು. ಈ ಸಂಸ್ಥೆಯ ಕಾರ್ಯಕ್ರಮಗಳನ್ನು ಸಾಮೂಹಿಕ ಪ್ರಯತ್ನದ ಮೂಲಕ ಜಾರಿಗೊಳಿಸಲಾಗುವುದು. ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಶಿಕ್ಷಕರು ಹಾಗೂ ಮಕ್ಕಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದರು.
ದೇಶದ ವಿವಿಧ ರಾಷ್ಟ್ರಗಳಲ್ಲಿಯೂ ಈ ಸಂಸ್ಥೆಗೆ ಮನ್ನಣೆ ದೊರೆತಿದ್ದು ನಮ್ಮ ಸಂಸ್ಥೆಯ ಸಾಧನೆ ಕೊಂಡಜ್ಜಿ ಬಸಪ್ಪನವರು ಸೇರಿದಂತೆ ಹಲವಾರು ಮುತ್ಸದ್ಧಿಗಳು ಈ ಸಂಸ್ಥೆಯನ್ನು ಸ್ಥಾಪಿಸಿ ಬೆಳೆಸಿದ್ದನ್ನು ಸ್ಮರಿಸಿದ ಅವರು, ಸಂಸ್ಥೆ ಬೆಳೆಯಲು ಮುಖ್ಯ ಕಾರಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಶಿಕ್ಷಕರು ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ಶಿಕ್ಷಕರು ನೈತಿಕ ಶಿಕ್ಷಣ ನೀಡಿ ಆಧ್ಯಾತ್ಮಿಕವಾಗಿ ಬೆಳೆಸಬೇಕು ಎಂದು ಸಲಹೆ ನೀಡಿದರು.
ಇಂತಹ ಸಂಸ್ಥೆಯಲ್ಲಿ ಕೆಲಸ ಮಾಡುವುದು ದೇವರ ಕೊಟ್ಟ ಭಾಗ್ಯವೆಂದು ಹೇಳಿದ ಅವರು ಶಿಕ್ಷಕರು ಮಕ್ಕಳಿಗೆ ಸಂಗೀತದ ಮೂಲಕ ಶಿಕ್ಷಣ ಕೊಡಬೇಕೆಂದು ಪ್ರತಿಯೊಬ್ಬರು ಅನೌಪಚಾರಿಕ ಶಿಕ್ಷಣ ಪಡೆಯಬೇಕು ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಂಪೂರ್ಣವಾಗಿ ಸಕರ್ಾರದ ಮೇಲೆ ಅವಲಂಬಿತವಾಗದೆ ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕೆಂದರು ಈ ಸಂಸ್ಥೆ ಹಮ್ಮಿಕೊಳ್ಳುವಂತಹ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಗುಣಾತ್ಮಕವಾಗಿ ಬದಲಾವಣೆ ಆಗಬೇಕೆಂದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ, ಧಾರವಾಡ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಭಿವೃದ್ಧಿ ಕೆಲಸಗಳು ಹಾಗೂ ಬೆಳವಣಿಗೆಗೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಹತ್ತು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಪ್ರಕಟಿಸಿದರು. ಇದೊಂದು ಪವಿತ್ರವಾದ ಸಂಸ್ಥೆ ಶಿಕ್ಷಕರು ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದರ ಜತೆಗೆ ಅವರಲ್ಲಿ ಶಿಸ್ತನ್ನು ಬೆಳೆಸಬೇಕೆಂದು ಸಲಹೆ ನೀಡಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಎಂ.ಎಂ. ಲೋಂಡೆ ದಂಪತಿಗಳನ್ನು ಸನ್ಮಾನಿಸಲಾಯಿತು.
ಧಾರವಾಡ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷೆ ರಜನಿ ದಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಗಜಾನನ ಮನ್ನಿಕೇರಿ, ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಸ್ಕೌಟ್ಸ್ ಜಿಲ್ಲಾ ಆಯುಕ್ತ ವಿವಿ ಕಟ್ಟಿ, ಗೈಡ್ಸ್ ಆಯುಕ್ತ ವಿದ್ಯಾ ನಾಡಿಗೇರ, ಸುಭಾಷ್ ಮೊರಬ, ವಿ.ವಿ. ಸಿಂಧೆ, ಎನ್.ಎನ್. ಪೂಜಾರ, ಕಾರ್ಯದಶರ್ಿ ಪ್ರಭಾ ಲೊಂಡೆ ಉಪಸ್ಥಿತರಿದ್ದರು
ಪ್ರಭಾ ಲೋಂಡೆ ಹಾಗೂ ಮಕ್ಕಳು ಸಾಮೂಹಿಕ ಪ್ರಾರ್ಥನೆ ಮಾಡಿದರು. ಮಹಾದೇವಿ ಯಕ್ಕುಂಡಿ ಕಾರ್ಯಕ್ರಮ ನಿರೂಪಿಸಿದರು. ಎನ್.ವಿ. ಕುರುವತ್ತಿಮಠ ವಂದಿಸಿದರು. ಸಮಾರಂಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಮಕ್ಕಳು ಉಪಸ್ಥಿತರಿದ್ದರು.