ಇಂಡಿಯಾ ಸ್ಕಿಲ್ಸ್-2025: ನೋಂದಾಯಿಸಿಕೊಳ್ಳಲು ಸೂಚನೆ
India Skills-2025: Notice to register
ಇಂಡಿಯಾ ಸ್ಕಿಲ್ಸ್-2025: ನೋಂದಾಯಿಸಿಕೊಳ್ಳಲು ಸೂಚನೆ
ವಿಜಯಪುರ,ಸೆಪ್ಟೆಂಬರ್,16 : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಓಲಿಂಪಿಕ್ಸ್‌ಹಿ2025ನ್ನು ಆಯೋಜಿಸಲಾಗಿದೆ. 16 ರಿಂದ 25 ವರ್ಷದ ಯುವಜನತೆ 63ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶವಿದೆ. ಜಿಲ್ಲಾಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸುಧಾರಿತ ತರಬೇತಿ ನೀಡಿ ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತಿದೆ. 2026ನೇ ಸಾಲಿನ ವಿಶ್ವ ಕೌಶಲ್ಯ ಸ್ಪರ್ಧೆ ಚೀನಾದ ಶಾಂಘೈ ನಗರದಲ್ಲಿ ನಡೆಯಲಿದೆ. ಇದರಲ್ಲಿ ಭಾರತವನ್ನು ಪ್ರತಿನಿಧಿಸಲು ಅವಕಾಶವಿರುತ್ತದೆ. ಈ ಕೌಶಲ್ಯ ಸ್ಪರ್ಧೆಗೆ ಣಣಠಿ://ತಿತಿತಿಞಟಟಟಿಜಚಿಜರಣಚಿಟ.ರಠ.ಟಿ/ಠಜ ಲಿಂಕ್ ಬಳಸಿ ಸೆಪ್ಟೆಂಬರ್ 30ರೊಳಗಾಗಿ ನೋಂದಾಯಿಸಿಕೊಳ್ಳಬಹುದು.
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲಿ ಇಂಡಿಯಾ ಸ್ಕಿಲ್ಸ್-2025ರ ಕುರಿತ ಕರಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ವಿಶ್ವ ಕೌಶಲ್ಯ ಸ್ಪರ್ಧೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವದ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆಯಾಗಿದ್ದು, ಚೀನಾದ ಶಾಂಘೈ ನಗರದಲ್ಲಿ 2026ರಲ್ಲಿ ನಡೆಯಲಿದೆ. ಈ ಸ್ಪರ್ಧೆಯ ಭಾಗವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್ 2025ನ್ನು ಪ್ರಾರಂಭಿಸಿದೆ. ಈ ಸ್ಪರ್ಧೆಯ ವಿಜೇತರಿಗೆ ಉನ್ನತ ಮಟ್ಟದ ತರಬೇತಿ ಮತ್ತು ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅವರು ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶವನ್ನು ಪಡೆಯಲಿದ್ದಾರೆ. ಜಿಲ್ಲೆಯ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಲಿಂಕ್ ಬಳಸಿಕೊಂಡು ನೋಂದಣಿ ಮಾಡಿಕೊಳ್ಳುವುದರ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಯಾದ ಮಹೇಶ ಮಾಳವಾಡೇಕರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಾಂತೇಶ ಬಾಗೇವಾಡಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಉಪಸ್ಥಿತರಿದ್ದರು.
ಈ ಕುರಿತಾಗಿ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ,ಮಹಾ ನಗರ ಪಾಲಿಕೆ ಹತ್ತಿರ,ಬಾಗಲಕೋಟೆ ರಸ್ತೆ, ವಿಜಯಪುರ-08352-297019,ಮೊ: 9741753565, ಮೊ: 8217615257 ಹಾಗೂ ಮೊ: 9620202102 ಸಂಪರ್ಕಿಸಬಹುದಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 