ಭಾರತೀಯ ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿ: ಡಾ. ಸಿದ್ದಲಿಂಗಮ್ಮ
ಪರಂಪರೆಯ ಉಳಿವು ಕುರಿತ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಪ್ರಾಚಾರ್ಯ ಡಾ. ಎಂ. ಎಸ್. ಯರಗೊಪ್ಪ
ಲೋಕದರ್ಶನ ವರದಿ
ಹಾವೇರಿ12: ಭಾರತೀಯ ಸಂಸ್ಕೃತಿ ಹಾಗೂ ಪರಂಪರೆ ಶ್ರೇಷ್ಠವಾಗಿದ್ದು, ವಿದೇಶಿಗರು ಭಾರತದ ಬಗ್ಗೆ ಕುತೂಹಲ ಹೊಂದಲು ಹಲವಾರು ವೈಶಿಷ್ಠ್ಯಗಳು ಕಾರಣವಾಗಿವೆ ಇಂತಹ ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಅದನ್ನು ಉಳಿಸುವ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂಬುದಾಗಿ ಸರಕಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕಿ ಡಾ. ಬಿ. ಜೆ. ಸಿದ್ದಲಿಂಗಮ್ಮ ತಿಳಿಸಿದರು.
ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು ಹಾಗೂ ಹಾವೇರಿಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪರಂಪರೆ ಕೂಟವು ಆಯೋಜಿಸಿದ್ದ 'ಪರಂಪರೆಯ ಉಳಿವು' ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ. ಎಸ್. ಯರಗೊಪ್ಪ ಇತಿಹಾಸದ ಅರಿವು ಎಲ್ಲರಿಗೂ ಅಗತ್ಯವಾಗಿದ್ದು, ಉತ್ತಮ ಅಂಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳವಂತೆ ವಿದ್ಯಾಥರ್ಿಗಳಿಗೆ ಕರೆನೀಡಿದರು.
ಜಿಲ್ಲಾ ಪರಂಪರೆ ಕೂಟದ ಸಂಚಾಲಕ ಡಾ. ಶಿವಯೋಗಿ ಕೋರಿಶೆಟ್ಟರ ಪರಂಪರೆಕೂಟದ ಧ್ಯೇಯೊದ್ಯೇಶ ಹಾಗೂ ಕೈಗೊಳ್ಳಲಾದ ಚಟುವಟಿಕೆಗಳ ಕುರಿತು ವಿವರಿಸಿದರು. ಸಹನಾ ದ್ಯಾವಣ್ಣನವರ ಇವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಪ್ರೊ. ನಾಗರಾಜ ಮುಚ್ಚಟ್ಟಿ ಸ್ವಾಗತಿಸಿದರು. ಸುಶೀಲಾ ಬಡಿಗೇರ ವಂದಿಸಿದರು. ಲಿಂಗರಾಜ ಕುರುಬರ ನಿರೂಪಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 