ಮಿರಜ್‌ದ ಡಾ. ಸಚೀನ ಆಸ್ಪತ್ರೆಯಲ್ಲಿ ಡಿ. 22 ರಂದು ಬಂಜೆತನ ನಿವಾರಣೆ, ಉಪಚಾರ ಶಿಬಿರ

Infertility treatment camp on Dec 22nd

ಕಾಗವಾಡ 18: ಮಹಾರಾಷ್ಟ್ರದ ಮಿರಜ ಪಟ್ಟಣದ ಸಚೀನ ಆಸ್ಪತ್ರೆಯಲ್ಲಿ ರವಿವಾರ ದಿ. 22 ರಂದು ಉಚಿತ ಮಹಿಳೆಯರ ಲೈಂಗಿಕ ರೋಗಗಳು, ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಖ್ಯಾತ ಸ್ತ್ರೀರೋಗ ತಜ್ಞ ಡಾ. ಸಚೀನ ಸುಗಣ್ಣವರ ತಿಳಿಸಿದ್ದಾರೆ. 

ಮಿರಜದಲ್ಲಿನ ಸಚೀನ ಆಸ್ಪತ್ರೆಯು ಬಂಜೆತನ ನಿವಾರಣೆ ಹಾಗೂ ಮಹಿಳೆಯರ ಲೈಂಗಿಕ ರೋಗಗಳ ನಿವಾರಣೆ ಕುರಿತು ಕಳೆದ ಹಲವಾರು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರಿ​‍್ಡಸಿ, ತನ್ನದೇ ಆದ ರೀತಿಯಲ್ಲಿ ಸಾಮಾಜಿಕ ಕಾರ್ಯವನ್ನು ಕೈಗೊಳ್ಳುತ್ತಿದೆ. 

ಈ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ, ಅತ್ಯಾಧುನಿಕ ಯಂತ್ರೋಪಕರಣಗಳು ಜೊತೆಗೆ ಆಸ್ಪತ್ರೆಯು ಹೈಟೆಕ್ ಸೌಲಭ್ಯವನ್ನು ಹೊಂದಿದೆ. ಪ್ರತಿ ತಿಂಗಳು ಮಹಿಳೆಯರ ಎಲ್ಲ ಲೈಂಗಿಕ ರೋಗಗಳ ಮತ್ತು ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಉಚಿತವಾಗಿ ಹಮ್ಮಿಕೊಳ್ಳುತ್ತಿದೆ. 

ಈಗಾಗಲೇ ಶಿಬಿರದ ಲಾಭವನ್ನು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಅನೇಕ ರೋಗಿಗಳು ಪಡೆದುಕೊಂಡಿದ್ದಾರೆ. 

ಲೈಂಗಿಕ ರೋಗಗಳಿಂದ ಬಳಲುವ ಹಾಗೂ ಮಕ್ಕಳಾಗದೇ ಇರುವ ದಂಪತಿಗಳು ರವಿವಾರ ದಿ. 22 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಜರುಗುವ ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ, ಉಪಚಾರ ಮತ್ತು ಕಡಿಮೆ ಖರ್ಚಿನಲ್ಲಿ ಶಸ್ತ್ರಕ್ರೀಯೆ ಮಾಡಲಾಗುವುದು. ಇದರ ಲಾಭವನ್ನು ಪಡೆದುಕೊಳ್ಳುವಂತೆ ಡಾ. ಸಚಿನ ಸುಗಣ್ಣವರ ಕರೆ ನೀಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9765010834 ಸಂಪರ್ಕಿಸಬಹುದು.