ಮಾರಕಟ್ಟೆ ಮತ್ತು ತಂತ್ರಜ್ಞಾನ ಅಳವಡಿಸುವ ಬಗ್ಗೆ ಮಾಹಿತಿ ಕುರಿತು ಕಾರ್ಯಕ್ರಮ
Information program on marketing and technology implementation
ಧಾರವಾಡ 17 : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಧಾರವಾಡ ಹಾಗೂ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, (ಓಏಖಖಋ) ಹುಬ್ಬಳ್ಳಿ ಇವರ ಸಹಯೋಗದಲ್ಲಿ ಜಿಲ್ಲೆಯ ಎಂಎಸ್‌ಎಂ ಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು, ರಾ್ಯಂಪ್ ಯೋಜನೆಯಡಿಯಲ್ಲಿ ಬಿ.ಡಿ.ಎಸ್.ಪಿ ಕಾರ್ಯಕ್ರಮವನ್ನು ದಿನಾಂಕ :17-01-2026 ರಂದುಬೆಳಿಗ್ಗೆ 10.30 ಗಂಟೆಗೆ ಹಾಲ್ಕೈಗಾರಿಕಾ ವಸಾಹತು ಗೋಕುಲ ರಸ್ತೆ ಹುಬ್ಬಳ್ಳಿಯಲ್ಲಿ ಆಯೋಜಿಸಲಾಯಿತು. ಸತ್ಯನಾರಾಯಣಭಟ್, ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಧಾರವಾಡ ಇವರು ದೀಪಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಖಂಒಕ ಯೋಜನೆಯಡಿ ಜರುಗುವ ಕಾರ್ಯಕ್ರಮಗಳ ಬಗ್ಗೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲ ಕೈಗಾರಿಕೊಧ್ಯಮಿಗಳಿಗೆ ಮಾಹಿತಿ ನೀಡಿದರು.
ತಜ್ಞ ಉಪನ್ಯಾಸಕರಾದ ಡಾ. ಪ್ರಸಾದರೋಡಗಿಯವರು ಒಖಒಇ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸೂಕ್ತವ್ಯಕ್ತಿಗಳಿಗೆ ಮಾರಕಟ್ಟೆ ಮತ್ತು ತಂತ್ರಜ್ಞಾನ ಅಳವಡಿಸುವ ಬಗ್ಗೆ ಜವಾಬ್ದಾರಿ ನೀಡುವ ಮೂಲಕ ಒಖಒಇ ಗಳ ಕಾರ್ಯಕ್ಷಮೆತೆಯನ್ನು ಹೆಚ್ಚಿಸುವ ಕುರಿತು ತಿಳಿಸಿದರು. ಸದರಿ ಕಾರ್ಯಕ್ರಮದಲ್ಲಿ ಕು. ಸುಧಾಜೆ. ಪವಾರ, ಉಪನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಧಾರವಾಡ ಮತ್ತು ಶಿವಾನಂದಕಮ್ಮಾರ, ಸಹಾಯಕ ನಿರ್ದೇಶಕರು, ಜಿ.ಕೈ.ಕೇ. ಧಾರವಾಡ, ವಿಜಯಭಾರತಿ, ಅಧ್ಯಕ್ಷರು, ಗ್ರೇಟರ್ ಹುಬ್ಬಳ್ಳಿ-ಧಾರವಾಡ ಇಂಡಸ್ಟ್ರೀಸ್ ಅಸೋಸಿಯೇಷನ್, ತಾರಿಹಾಳ, ಎ. ಟಿ. ಪವಾರ್, ಅಧ್ಯಕ್ಷರು, ಎಸ್.ಎಸ್.ಕೆಸ್ಮಾಲ್ ಸ್ಕೇಲ್ ಇಂಡಸ್ಟ್ರೀಯಲ್ ಅಸೋಸಿಯೇಷನ್, ಹುಬ್ಬಳ್ಳಿ, ಗೀರೀಶನಲವಡಿ, ಮನೋಹರ್ ಕೋಟ್ಟೂರ ಶೆಟ್ಟರ್ ಇವರುಗಳು ಅತಿಥಿಗಳಾಗಿ ಭಾಗವಹಿಸಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಆಡಳಿತ ಮಂಡಳಿ ಸದಸ್ಯರುಗಳು ಹಾಗೂ ಜಿಲ್ಲೆಯ ಕೈಗಾರಿಕೋಧ್ಯಮಿಗಳು ಭಾಗವಹಿಸಿದ್ದರು. ರಮೇಶ ಪಾಟೀಲ್, ಅಧ್ಯಕ್ಷರು, ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪತಿಭಟ್, ಕಾರ್ಯದರ್ಶಿಗಳು ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 