ವಿದ್ಯಾರ್ಥಿಗಳು ಪ್ಲೇಸ್‌ಮೆಂಟ್ ಪಡೆಯಲು ಮಾಹಿತಿ ತಂತ್ರಜ್ಞಾನ ಹಾಗೂ ವಿಶ್ಲೇಷಣಾತ್ಮಕ ಕೌಶಲ್ಯಗಳು ಅತ್ಯಗತ್ಯ - ಡಾ. ಅಜಿತ ಪ್ರಸಾದ
Information technology and analytical skills are essential for students to get placements - Dr. Aji
ಧಾರವಾಡ 11: ಪಠ್ಯದ ಜೊತೆಗೆ ಕೌಶಲ್ಯಾಭಿವೃದ್ಧಿಗೆ ಅಗತ್ಯವಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಕ್ಲೌಡ್‌ಕಂಪ್ಯೂಟಿಂಗ್ ಮತ್ತು ವಿಶ್ಲೇಷಣಾತ್ಮಕ ಕೌಶಲ್ಯಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತವೆ. ಆ ಮೂಲಕ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬಹುದು ಎಂದು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್. ಮಂಜುನಾಥೇಶ್ವರ ಎಂ.ಸಿ.ಎ. ಮಹಾವಿದ್ಯಾಲಯ ಹಮ್ಮಿಕೊಂಡ ಉದ್ಯೋಗ ಪೂರ್ವ ತರಬೇತಿ ಮತ್ತು ಸರ್ಟಿಫಿಕೆಶನ್ ಕೋರ್ಸ ಉದ್ಘಾಟಿಸಿ ಅವರು ಮಾತನಾಡಿದರು.
ಎಂ.ಸಿ.ಎ. ಕಾಲೇಜು ಜನತಾ ಶಿಕ್ಷಣ ಸಮಿತಿಯ 25ನೇ ಅಂಗ ಸಂಸ್ಥೆಯಾಗಿ ವಿದ್ಯಾರ್ಥಿಗಳ ಸವಾಂರ್ಗೀಣ ಅಭಿವೃದ್ಧಿಗಾಗಿ ಗುಣಮಟ್ಟದ ಶಿಕ್ಷಣ ನೀಡುತ್ತ ಮುನ್ನಡೆಯುತ್ತಿದೆ. ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಪಠ್ಯೇತರ ಚಟುವಟಿಕೆ ಮತ್ತು ವಿವಿಧ ಸರ್ಟಿಫಿಕೆಟ್ ಕೋರ್ಸ್, ನೀಡುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರಬುನಾದಿ ಕಲ್ಪಿಸಲಾಗುತ್ತಿದೆ.
ನಮ್ಮ ಕಾಲೇಜಿನಲ್ಲಿ ಆಯೋಜಿಸಲಾಗುವ ಉದ್ಯೋಗಮೇಳಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಯಶಸ್ಸಿನ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸ್ಫರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಗ್ರಂಥಾಲಯವನ್ನು ನಿರ್ಮಿಸಲಾಗಿದೆ. ಈ ಗ್ರಂಥಾಲಯದ ಸದುಪಯೋಗ ಪ್ರತಿಯೊಬ್ಬ ವಿದ್ಯಾರ್ಥಿ ಪಡೆದುಕೊಳ್ಳಬೇಕು ಎಂದರು.
ಈಗ ಮೂರು ದಿನಗಳ ಕಾಲ ನಡೆಯಲಿರುವ ಉದ್ಯೋಗ ಪೂರ್ವ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಮತ್ತು ಕಾರ್ೊರೇಟ್ ಟ್ರೇನರ್ ಶ್ರೀ ರಮನ್ ವೆಂಕಟ್ ಅವರಿಂದ ಮತ್ತು 20 ದಿನಗಳ ಸರ್ಟಿಫಿಕೆಟ್ ಕೋರ್ಸ ಕರಣಂ ಗುರುತೇಜ ಅವರುಗಳಿಂದ ನಡೆಯುತ್ತಿದ್ದು ವಿದ್ಯಾರ್ಥಿಗಳು ಆಸಕ್ತಿಯಿಂದ ಈ ಕಾರ್ಯಾಗಾರದಲ್ಲಿ ಭಾಗಿಯಾಗಿ ವಿವಿಧ ಕೌಶಲ್ಯಗಳನ್ನು ಮೈಗೂಡಿಸಿಕೊಂಡು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುವಂತಾಗಬೇಕೆಂದು ಶುಭಕೋರಿದರು.
ಬಿ.ಸಿ.ಎ., ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ಮೂರು ದಿನಗಳ ವಿಶೇಷ ಕಾರ್ಯಗಾರ ಹಾಗೂ ಎಂ.ಸಿ.ಎ. ವಿದ್ಯಾರ್ಥಿಗಳಿಗೆ ಂಘಖ ಚಿಟಿಜ ಆಜತಓಠಿ ಕುರಿತು ಸರ್ಟಿಪಿಕೇಟ್‌ಕೋರ್ಸ್‌ನ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಇವುಗಳ ಮೂಲಕ ಈ ತಾಂತ್ರಿಕ ಜಗತ್ತಿನಲ್ಲಿ ತಮ್ಮ ಜ್ಞಾನಾಭಿವೃದ್ಧಿ ಮಾಡಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕೆಂದು ಎಂ.ಸಿ.ಎ. ನಿರ್ದೇಶಕರಾದ ಡಾ. ಸೂರಜ್ ಜೈನ್ ಹೇಳಿದರು.
ಕು. ಪ್ರಿಯಾಂಕಾ ಬಸವ ಪ್ರಾರ್ಥಿಸಿದರು. ಡಾ. ಸೂರಜ ಜೈನ್ ಸ್ವಾಗತಿಸಿದರು ಡಾ. ಮಂಜುನಾಥ ಪೂಜಾರ ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ಬಾಹುಬಲಿ ಚಿವಟೆ ನಿರೂಪಿಸಿದರು. ಡಾ. ಬಸವರಾಜ ಗೌಡನ್ನವರ ವಂದಿಸಿದರು. ಪ್ರೊ. ಮಂಜುಳಾ ಕಲ್ಮಠ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 