ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ
Information to the public about the five guarantee schemes
ಸಂಬರಗಿ, 28 : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಭಾಗವಹಿಸಿದ್ದ ಫಲಾನುಭವಿಗಳು ಗ್ಯಾರಂಟಿ ಯೋಜನೆಗಿಂದ ತಮ್ಮ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಆಗಿದೆ ಎಂದುಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಥಣಿ ತಾಲೂಕು ಅಧ್ಯಕ್ಷರಾದ ಸಿದ್ಧಾರ್ಥ ಸಿಂಗೆ ಹೇಳಿದರು.
ತಂಗಡಿ, ಮುರಗುಂಡಿ, ಗ್ರಾಮ ಪಂಚಾಯತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಿ ಮಾತನಾಡಿ ಅವರು ಗ್ರಾಮೀಣ ಬಡ ಜನರ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಜೊತೆಗೆ ಮಹಿಳೆಯರು ಶಕ್ತಿ ಹಾಗೂ ಗೃಹ ಲಕ್ಷ್ಮೀ ಯೋಜನೆ ಸೌಲಭ್ಯ ಪಡೆದುಕೊಂಡು ಸ್ವಾವಲಂಬನೆ ಜೀವನ ಕಟ್ಟಿಕೊಂಡಿದ್ದಾರೆ ಎಂದರು.
ಈ ಕುರಿತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅನುಷ್ಠಾನ ಸಮಿತಿ ಸದಸ್ಯರುಗಳಾದ ಬಸಪ್ಪ ಗುಮಟಿ, ಪ್ರಶಾಂತ ಇಜಾರೆ, ರಾಹುಲ ಮಾಚಕನೂರ, ಶಿವಾನಂದ ಸೌದಾಗರ, ರಾಜು ಪಾಟೀಲ, ಹಣಮಂತ ಹಟ್ಟಿ, ಸುಜನ ಸತ್ತಿಕರ, ಸಯ್ಯದ ಗಡ್ಡೇಕರ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸ್ಥಳೀಯ ಮುಖಂಡರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 