ಜಿ.ಪಂ ಸಿಇಓ ರವರಿಂದ ಜೆಜೆಎಮ್ ಎಮ್ ಕಾಮಗಾರಿ ಪರೀಶೀಲನೆ
Inspection of JJM M work by G. Pm CEO
ಜಿ.ಪಂ ಸಿಇಓ ರವರಿಂದ ಜೆಜೆಎಮ್ ಎಮ್ ಕಾಮಗಾರಿ ಪರೀಶೀಲನೆ
ಕಾರವಾರ.ಆ.11:- ಗ್ರಾಮೀಣ ಪ್ರದೇಶದಲ್ಲಿ ಬಾವಿ ನೀರಿನ ಬಳಕೆ ಅಧಿಕವಾಗಿದ್ದು ತಾಲೂಕಿನ ಕೆಲವು ಭಾಗಗಳಲ್ಲಿ ಜಲಜೀವನ್ ಮಿಷನ್ ಯೋಜನೆಯ ನೀರಿನ ಬಳಕೆ ಕಡಿಮೆ ಇದೆ ಹೀಗಾಗಿ ಸಾರ್ವಜನಿಕರ ನೀರಿನ ಬಳಕೆಯನ್ನ ಆಧರಿಸಿ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಕರ ಪಾವತಿಸಲು ಅವಕಾಶ ಮಾಡಿಕೊಡಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ ಅವರು ಸೂಚನೆ ನೀಡಿದರು.
ಅವರು ಇಂದು ಸಿದ್ದಾಪುರ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಅಭಾವ ತಡೆಯಲು ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಜಲಜೀವನ್ ಮಿಷನ್ ನಡಿ ಅನುಷ್ಠಾನಗೊಂಡ ಕಾಮಗಾರಿಗಳ ಸ್ಥಳ ಭೇಟಿ ನಡೆಸಿ ಗುಣಮಟ್ಟ ಪರೀಶೀಲಿಸಿದರು.
ಮನೆ ಬಳಕೆ ಹಾಗೂ ಕುಡಿಯುವ ನೀರಿನಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು.ಇನ್ನೂ ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳು ಪ್ರತಿ ಮನೆಗೂ ತಲುಪಬೇಕು ಜೊತೆಗೆ ನೀರಿನ ಶುದ್ಧತೆ ಹಾಗೂ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದರು.
ಈ ವೇಳೆ ತಾಲೂಕಿನ ಹಲಗೇರಿ, ಕವಂಚೂರು, ಶಿರಳಗಿ, ಕಾನಗೋಡ ಹಾಗೂ ಬೇಡ್ಕಣಿ ಗ್ರಾಮ ಪಂಚಾಯತ್‌ಗಳಲ್ಲಿ ನೀರಿನ ಸಮರ್ಕ ಬಳಕೆ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದರು. ಗ್ರಾಮ ಪಂಚಾಯತ್‌ಗಳಿಗೆ ನೀರು ಸರಬರಾಜು ನಿರ್ವಹಣೆಯನ್ನು ಸಮರ್ಕವಾಗಿ ನಿಭಾಯಿಸಲು ಅಗತ್ಯ ಸಲಹೆ ನೀಡಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 