ಪ್ರಸಾದ್ ಅಬ್ಬಯ್ಯ ಕಾಮಗಾರಿಗಳ ಪರೀಶೀಲನೆ

ಮನೆಗಳ ಕಾಮಗಾರಿ ಸ್ಥಳಕ್ಕೆ ಭೇಟಿ ಮಾಡಿ ಕಾಮಗಾರಿಗಳನ್ನು ಪರೀಶೀಲನೆ ನಡೆಸಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ ಸಲಹೆ ಸೂಚನೆ ನ

ಪ್ರಸಾದ್ ಅಬ್ಬಯ್ಯ ಕಾಮಗಾರಿಗಳ ಪರೀಶೀಲನೆ  

ಕೊಪ್ಪಳ 27: ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಹುಬ್ಬಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಮಂಗಳವಾರದಂದು ಕೊಪ್ಪಳ ನಗರಕ್ಕೆ ಭೇಟಿ ನೀಡಿ ನಗರದ ಮೂರನೇ ವಾರ್ಡಿನಲ್ಲಿ ಪ್ರಧಾನ ಮಂತ್ರಿ ಆವಾಜ್ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಸ್ಥಳಕ್ಕೆ ಭೇಟಿ ಮಾಡಿ ಕಾಮಗಾರಿಗಳನ್ನು ಪರೀಶೀಲನೆ ನಡೆಸಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ ಸಲಹೆ ಸೂಚನೆ ನೀಡಿದರು.  

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಇದೆ ಸಂದರ್ಭದಲ್ಲಿ ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮೂರನೇ ವಾರ್ಡಿನ ಸದಸ್ಯರಾಗಿರುವ ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಲ್ಲದೆ ಸಂಬಂಧಿಸಿದ ಅಧಿಕಾರಿ ವರ್ಗದವರು ಸಹ ಪಾಲ್ಗೊಂಡಿದ್ದರು.