ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಸಂಸ್ಥೆ ಉಪಾಧ್ಯಕ್ಷ ಜಿನೇಶ್ವರ ಮಗದುಮ್ಮ ಚಾಲನೆ
ರಾಯಬಾಗ 23 : ಕ್ರೀಡಾಪಟುಗಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಸ್ಪರ್ಧಾತ್ಮಕ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದು ಬಾವನ ಸೌಂದತ್ತಿಯ ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು.ರವಿವಾರ ತಾಲೂಕಿನ ಬಾವನ ಸೌಂದತ್ತಿಯ ಬಿ ಎಂ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗುವುದು ಎಂದರು.ಸಂಸ್ಥೆ ಉಪಾಧ್ಯಕ್ಷ ಜಿನೇಶ್ವರ ಮಗದುಮ್ಮ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಾರ್ಯದರ್ಶಿ ಎ.ಟಿ.ಕೂಗೆ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಅಜಿತ ಕಾಮಗೌಡ, ಬಾಬು ಜನಾಜ, ಅರಿಹಂತ ಕಾಮಗೌಡ, ಮುಖ್ಯ ಶಿಕ್ಷಕ ಎ. ಕೆ. ಸಲಗರೆ, ಡಿ.ಆರ್. ಭೆಂಡೆ ಹಾಗೂ ಶಿಕ್ಷಕರು ಮತ್ತು ಕ್ರೀಡಾ ವಿದ್ಯಾರ್ಥಿಗಳು ಇದ್ದರು.