ಬಹುಗ್ರಾಮ ತ್ಯಾಜ್ಯ ವಿಲೇವಾರಿ ಘಟಕ ಅಳವಡಿಕೆಗೆ ಆಸಕ್ತಿ ವ್ಯಕ್ತ

ಲೋಕದರ್ಶನ ವರದಿ

ಕೊಪ್ಪಳ 12: ಕೊಪ್ಪಳ ತಾಲೂಕು ಹುಲಿಗಿ-ಹೊಸಳ್ಳಿಯಲ್ಲಿ ಸ್ಥಾಪಿಸಲಾಗಿರುವ ಬಹುಗ್ರಾಮ ಘನತ್ಯಾಜ್ಯ ಕಸ ವಿಲೇವಾರಿ ಘಟಕವು ಅತ್ಯುತ್ತಮ ಘಟಕವಾಗಿದ್ದು, ಇದೇ ಮಾದರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಬಹುಗ್ರಾಮ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ರಾಜ್ಯದ ಬಹುತೇಕ ಜಿಲ್ಲೆಗಳು ಉತ್ಸುಕರಾಗಿವೆ.

                ವಿವಿಧ ಜಿಲ್ಲೇಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಹುಲಿಗಿ-ಹೊಸಳ್ಳಿಯಲ್ಲಿ ಸ್ಥಾಪಿಸಲಾಗಿರುವ ಘನತ್ಯಾಜ್ಯ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಪಾರ ಮೆಚ್ಚುಗೆಯ ಮಾತನಾಡಿದರು.

                ಹಲವು ಗ್ರಾಮ ಪಂಚಾಯತಿಗಳ ಸಹಭಾಗಿತ್ವದಲ್ಲಿ ನಿಮರ್ಿಸಲಾಗಿರುವ ಘನತ್ಯಾಜ್ಯ ಕಸ ವಿಲೇವಾರಿ ಘಟಕ ಅತ್ಯುತ್ತಮವಾಗಿದೆರಾಜ್ಯದ ಬಹುತೇಕ ಜಿಲ್ಲಾ ಪಂಚಾಯತಿ, ತಾ.ಪಂ. ಹಾಗೂ ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು ಘಟಕಕ್ಕೆ ಭೇಟಿ ನೀಡಿ ಇಲ್ಲಿನ ಅತ್ಯುತ್ತಮ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಬಗ್ಗೆ ಮಾಹಿತಿ ಪಡೆದಿದ್ದೆವುಹೀಗಾಗಿ ಘಟಕಕ್ಕೆ ಭೇಟಿ ನೀಡಿ, ಘಟಕದ ಕುರಿತು ಮಾಹಿತಿ ಪಡೆದುಕೊಳ್ಳಲು, ವಿವಿಧ ಜಿಲ್ಲಾ ಪಂಚಾಯತಿಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳನ್ನೊಳಗೊಂಡ ತಂಡ ಮಾಡಿಕೊಂಡು ಕೊಪ್ಪಳ ಜಿಲ್ಲೆಗೆ ನೊಡಲು ಆಗಮಿಸುತ್ತಿದ್ದಾರೆಇಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯವನ್ನು ಪ್ರತ್ಯೇಕಿಸುವ ವ್ಯವಸ್ಥೆ, ಎರೆಹುಳು ಗೊಬ್ಬರ ತಯಾರಿಕೆ ಘಟಕ, ಪ್ಲಾಸ್ಟಿಕ್ ತ್ಯಾಜ್ಯದಿಂದ ಫ್ಲೋರ್ ಬ್ರಿಕ್ಸ್ ತಯಾರಿಕೆ, ತರಬೇತಿ ಕೇಂದ್ರ ವ್ಯವಸ್ಥೆ ಇಲ್ಲಿದೆರಾಜ್ಯಕ್ಕೇ ಮಾದರಿಯಾಗಿರುವ ಇಂತಹ ಅತ್ಯುತ್ತಮ ಘಟಕ ಕೊಪ್ಪಳ ಜಿಲ್ಲೆಯಲ್ಲಿ ಸ್ಥಾಪನೆಯಾಗಿರುವುದು ನಿಜಕ್ಕೂ ಅಭಿನಂದನೆಗೆ ಅರ್ಹವಾಗಿದೆವಿವಿಧ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿಯೂ ಕಸ ವಿಲೇವಾರಿಯ ಸಮಸ್ಯೆಗಳಿದ್ದು, ಇಲ್ಲಿನ ಮಾದರಿಯಲ್ಲಿಯೇ ಹಲವು ಗ್ರಾಮಗಳ ಜೊತೆಗೂಡಿ, ಇದೇ ಮಾದರಿಯ ಘನತ್ಯಾಜ್ಯ ಕಸ ವಿಲೇವಾರಿ ಘಟಕವನ್ನು ಸ್ಥಾಪಿಸುವ ಬಗ್ಗೆ ಪರಿಶೀಲನೆ ನಡೆಸಲು ಹಲವರು ಸ್ಥಳಿಯ ಸಂಸ್ಥಗಳ ಜನಪ್ರತಿನಿಧಿಗಳು ತೀಮರ್ಾನಿಸಿದ್ದಾರೆ, ಇದು ಒಳ್ಳೆಯ ಬೇಳವಣಿಗೆ ಕೂಡ ಆಗಿದೆ.

                ಪ್ರತಿ ಗ್ರಾಮ ಪಂಚಾಯತಿಗೆ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ 20 ಲಕ್ಷ ರೂ. ಅನುದಾನ ದೊರೆಯಲಿದ್ದು, ಘಟಕಗಳ ಸ್ಥಾಪನೆಗೆ ಸೂಕ್ತ ಸ್ಥಳವನ್ನು ಗುರುತಿಸುವುದು, ಇತರೆ ಯೋಜನೆಗಳನ್ನು ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಕನ್ವಜರ್ೆನ್ಸ್ ಮಾಡುವುದು ಕುರಿತಂತೆ ಯೋಜನೆ ರೂಪಿಸಲಾಗಿದೆ. ಜಿಲ್ಲಾ ಪಂಚಾಯತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸಲಾಗಿದೆ.                                ಕೊಪ್ಪಳ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಘಟಕದ ಮುಖ್ಯಸ್ಥ ಹುಲಿಗಿ ಗ್ರಾಮದ ನಿವಾಸಿ ಟಿ. ಜನಾರ್ಧನ ಹುಲಿಗಿ ಅವರು ಘನತ್ಯಾಜ್ಯ ವಿಲೇವಾರಿ ಘಟಕದ ಎಲ್ಲ ವಿಭಾಗಗಳ ಕುರಿತು ಹುಲಿಗಿ ಘಟಕಕ್ಕೇ ಭೇಟಿ ನೀಡುವ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪರಿಚಯಿಸಿ, ಇಲ್ಲಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಾರೆ. ನಮ್ಮ ಹುಲಿಗಿಯ ಘನತ್ಯಾಜ್ಯ ಕಸ ವಿಲೇವಾರಿ ಘಟಕ ರಾಜ್ಯಕ್ಕೆ, ರಾಷ್ಠ್ರಕ್ಕೆ ಮಾದರಿಯಾಗಿದೆ, ಇದಕ್ಕೆ ಸಾಕ್ಷಿಯಾಗಿ ಇಲ್ಲಿ ರಾಜ್ಯದ ಮೂಲೆ-ಮೂಲೆಗಳಿಂದ ಸ್ಥಳಿಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ವೀಕ್ಷಣೆಗಾಗಿ ತಂಡೊಪ-ತಂಡವಾಗಿ ಆಗಮಿಸುತ್ತಿತರುವುದು, ಗಮನಾರ್ಹವಾಗಿದೆ.