ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ರ್ಯಾಲಿಗೆ ಚಾಲನೆ.
International Day of Democracy: Bike rally kicks off.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ರ್ಯಾಲಿಗೆ ಚಾಲನೆ.
ಕಾರವಾರ 14 :- ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ, ಕಾರವಾರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೆಂಗಳೂರಿನ ವರೆಗೆ ಸಂಚರಿಸುವ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಭಾನುವಾರ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಸ್ವೀಕಾರ ನಡೆಯಿತು.ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ದೀಪನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಉಮೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ಮತ್ತಿತರರು ಇದ್ದರು.ಉತ್ತರ ಕನ್ನಡ ಜಿಲ್ಲೆಯಿಂದ 10 ಮಂದಿ ಬೈಕ್ ರೈಡರ್ ಗಳು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೋಮವಾರ ಬೆಂಗಳೂರುನಲ್ಲಿ ನಡೆಯುವ ಬೈಕ್ ರ್ಯಾಲಿಯಲ್ಲಿ ಭಾಗವಹಿಸಲು ತೆರಳಿದ್ದು, ಈ ತಂಡದಲ್ಲಿ 3 ಮಂದಿ ಪೊಲೀಸ್ ಸಿಬ್ಬಂದಿಗಳು ಸಹ ಭಾಗವಹಿಸಿದ್ದು, ರೈಡರ್ ಗಳ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಸುರಕ್ಷಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 