ಡಿ.03 ರಂದು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ
International Day of Persons with Disabilities program on December 3rd
ಬಳ್ಳಾರಿ,ನ.29: ‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವ ಉತ್ತೇಜನ’ ಎಂಬ ಘೋಷವಾಕ್ಯದಡಿ ಡಿ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಏರಿ್ಡಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಚಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನ ಮತ್ತು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪಧೆಗಳಲ್ಲಿ ವಿಜೇತರಾದ ವಿಕಲಚೇತನರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 