ಮಾ.12 ರಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

International Women's Day celebration program at Sri Krishnadevaraya University, Vijayanagara on Ma

ಮಾ.12 ರಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ 

ಬಳ್ಳಾರಿ 11: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಮಾ.12 ರಂದು ಮಧ್ಯಾಹ್ನ 3.30 ಗಂಟೆಗೆ ವಿವಿಯ ಡಾ.ಬಿ.ಆರ್‌.ಅಂಬೇಡ್ಕರ್ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಮುನಿರಾಜು.ಎಂ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿವಿಯ ಸಿಂಡಿಕೇಟ್ ಸದಸ್ಯರಾದ ಜಯಲಕ್ಷ್ಮಿ ನಾಯಕ್, ಕುಲಸಚಿವ (ಆಡಳಿತ) ರುದ್ರೇಶ್ ಎಸ್‌.ಎನ್‌., ಕುಲಸಚಿವ(ಮೌಲ್ಯಮಾಪನ) ಪ್ರೊ.ಎನ್‌.ಎಂ.ಸಾಲಿ, ಹಣಕಾಸು ಅಧಿಕಾರಿ ನಾಗರಾಜ, ಸಂಯೋಜಕರಾದ ಡಾ.ಗೋಪಾಲ್ ಎನ್‌., ಡಾ.ಅಂಶುಮಾಲಿ ಎಂ.ಕೆ ಸೇರಿದಂತೆ ವಿವಿಯ ಸಿಂಡಿಕೇಟ್, ವಿದ್ಯಾವಿಷಯಕ ಪರಿಷತ್ ಸದಸ್ಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.