ಮಾ.08 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ 07: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾ ವಕೀಲರ ಸಂಘ ಮತ್ತು ರೀಡ್ಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮಾ.08 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು.ಕಾರ್ಯಕ್ರಮದಲ್ಲಿ ಎಲ್ಲಾ ಗೌರವಾನ್ವಿತ ನ್ಯಾಯಾಧೀಶರು, ವಕೀಲರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ ವರ್ಗ, ರೀಡ್ಸ್ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಕಕ್ಷಿದಾರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.