ಕೊಪ್ಪಳ 13: ಇದೇ ಜೂನ್. 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾರವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುವ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್. 21 ರಂದು ಬೆಳಿಗ್ಗೆ 07 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಕ್ರೀಡಾಂಗಣವನ್ನು ನಗರಸಭೆಯಿಂದ ಸ್ವಚ್ಛಗೋಳಿಸಿ. ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲಜುಗಳ ವಿದ್ಯಾರ್ಥಿಗಳು ಭಾಗವಹಿಸುವಂತೆ ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ಮಕ್ಕಳು ಕಾರ್ಯಕ್ರಮ ದಿನದಂದು ಬೆಳಿಗ್ಗೆ 06 ಗಂಟೆಗೆ ಹಾಜರಾಗಬೇಕಾಗಿದ್ದು, ಸೂಕ್ತ ವಾಹನದ ವ್ಯವಸ್ಥೆಯನ್ನು ಕಲ್ಪಿಸಿ. ವಸತಿ ನಿಲಯಗಳ ಪ್ರೌಢ ಹಾಗೂ ಪಿಯುಸಿ ವಿದ್ಯಾಥರ್ಿಗಳ ಸಹ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರು ಕ್ರಮ ವಹಿಸಿ. ಆಶಾ ಹಾಗೂ ಅಂಗನವಾಡಿ ಕಾರ್ಯಕತರ್ೆಯರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಅಗತ್ಯ ಕ್ರಮವಹಿಸಿ. ವಿದ್ಯಾರ್ಥಿಗಳನ್ನು ಕರೆದು ಕೊಂಡು ಹೋಗುವ ಮತ್ತು ವಾಪಸ್ಸ ಬರುವ ವ್ಯವಸ್ಥೆಯ ಕುರಿತು ಶಿಕ್ಷಣ ಇಲಾಖೆಯವರು ನಿಗಾವಹಿಸಿ. ಕಾರ್ಯಕ್ರಮ ದಿನದಂದು ಆಯುಷ ಇಲಾಖೆಯವರು ಬೆಳಿಗ್ಗೆಯ ಉಪಹಾರ ವ್ಯವಸ್ಥೆಯನ್ನು ಮಾಡಬೇಕು. ಆಹಾರವನ್ನು ಕಡ್ಡಾಯವಾಗಿ ಪರಿಕ್ಷೀಸಬೇಕು. ಅಗತ್ಯ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಮಾಡಬೇಕು. ಕ್ರೀಡಾಂಗಣದ ಸ್ವಚ್ಛತೆಯ ಬಗ್ಗೆ ಕ್ರೀಡಾ ಇಲಾಖೆಯವರು ನಿಗಾವಹಿಸಬೇಕು. ಯಾವುದೇ ಲೋಪ ದೋಷಗಳಿಲ್ಲದೇ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿ ಯಶಸ್ವಿಗೊಳಿಸುವಂತೆ ಕೊಪ್ಪಳ ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾರವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಸವರಾಜ ಕುಂಬಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ, ಹಿರಿಯ ವೈದ್ಯಾಧಿಕಾರಿ ಡಾ. ಬಿ.ಜಿ. ಪಾಟೀಲ್, ವೈದ್ಯಾಧಿಕಾರಿ ಡಾ. ಗುರುರಾಜ ಉಮಚಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.