ಪ್ರಭಾಕರ ಕೋರೆ ಅವರನ್ನು ಸತ್ಕರಿಸಿದ ಈರಣ್ಣ ಕಡಾಡಿ
Iranna Kadadi hosted Prabhakar Kore
ಬೆಳಗಾವಿ 30 : 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೆಎಲ್‌ಇ ಸಂಸ್ಥೆಯ ನಿಕಟಪೂರ್ವ ಕಾರ್ಯಾಧ್ಯಕ್ಷರು ಹಾಗೂ ರಾಜ್ಯಸಭೆಯ ಮಾಜಿ ಸದಸ್ಯರಾದ ಡಾ. ಪ್ರಭಾಕರ ಕೋರೆ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಸನ್ಮಾನಿಸಿ ಶುಭ ಕೋರಿದರು ..ಕೆಎಲ್‌ಇ ಸಂಸ್ಥೆಯ ಕಾರ್ಯಧ್ಯಕ್ಷರಾಗಿ ಡಾ. ಪ್ರಭಾಕರ್ ಕೋರೆ ಅವರು 4 ದಶಕಗಳಿಗೂ ಹೆಚ್ಚು ಕಾಲ 38 ಸಂಸ್ಥೆಗಳನ್ನು 300 ಕ್ಕೂ ಅಧಿಕ ಅಂಗ ಸಂಸ್ಥೆಗಳಿಗೆ ವಿಸ್ತರಿಸಿದ್ದಾರೆ. ಶಿಕ್ಷಣ, ವೈದ್ಯಕೀಯ ಹಾಗೂ ಸಮಾಜಮುಖಿ ಕ್ಷೇತ್ರಗಳಲ್ಲಿ ಅವರು ನೀಡಿದ ಅಮೂಲ್ಯ ಸೇವೆಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿರುವುದು ಇದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದರು.ಬೆಳಗಾವಿ ವಿಧಾನಸಭಾ ಅಧಿವೇಶನ ನಡೆಯಲು ಕಾರಣೀಭೂತರು, ವೀರಶೈವ ಲಿಂಗಾಯತ ಸಮಾಜದ ಚಟುವಟಿಕೆಗಳ ಆಶ್ರಯದಾತರು, ಕನ್ನಡ ಪರ ಚಟುವಟಿಕೆಗಳಿಗೆ ಪ್ರೋತ್ಸಾಹದಾಯಕರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಸೇವೆ ನೀಡಲು ದೇವರು ಅವರಿಗೆ ಹೆಚ್ಚಿನ ಆಯುಷ್ಯ ಆರೋಗ್ಯ ನೀಡಲಿ ಎಂದು ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 