ಬಗರ್ ಹುಕಂ ಸಾಗುವಳಿದಾರರಿಗೆ ಸಾಗುವಳಿ ಹಕ್ಕುಪತ್ರ ನೀಡಿ: ಯು ಬಸವರಾಜ್
Issue Cultivation Rights to Bagar Hukam Cultivators: U Basavaraj
ಬಗರ್ ಹುಕಂ ಸಾಗುವಳಿದಾರರಿಗೆ ಸಾಗುವಳಿ ಹಕ್ಕುಪತ್ರ ನೀಡಿ: ಯು ಬಸವರಾಜ್
ಗಜೇಂದ್ರಗಡ 06: ಭೂಮಿ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ನೀಡಲು ಅಧಿಕಾರಿಗಳು ಅಸಡ್ಡೆತೋರುತ್ತಿದ್ದಾರ ೆ ಎಂದು ಕರ್ನಾಟಕ ಪ್ರಾಂತರೈತ ಸಂಘದ ರಾಜ್ಯ ಉಪಾಧ್ಯಕ್ಷ ಬಸವರಾಜ ಹೇಳಿದರು.
ನಗರದ ತಹಶಿಲ್ದಾರರ ಕಚೇರಿ ಮುಭಾಂಗದಲ್ಲಿ ಕರ್ನಾಟಕ ಪ್ರಾಂತರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.
ಜಮೀನುಗ್ರಾಮೀಣಜನರಉತ್ಪಾದನೆಯ ಏಕೈಕ ಮಾರ್ಗವಾಗಿದೆ.
ತಾಲ್ಲೂಕಿನಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಿಲ್ಲ. ಅರ್ಜಿ ಸಲ್ಲಿಸಿದವರಿಗೆ ಮನೆ, ನಿವೇಶನ ಹಂಚಿಲ್ಲ. ಸಾಗುವಳಿ ಚೀಟಿಗಳನ್ನು ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯತೋರುತ್ತಿದ್ದಾರೆಎಂದರು.
ಕರ್ನಾಟಕ ಪ್ರಾಂತಕೃಷಿಕೂಲಿಕಾರ ಸಂಘದತಾಲೂಕಾಧ್ಯಕ್ಷ ಬಾಲು ರಾಠೋಡ ಮಾತನಾಡಿ
ಬಗರ್ ಹುಕಂ ಸಾಗುವಳಿದಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅನೇಕ ಬಾರಿ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಎಸಿ ಸೇರಿ ವಿವಿಧ ಅಧಿಕಾರಿಗಳಿಗೆ ಮನವಿ ಮಾಡಿದರೂಯಾರೂ ಗಮನ ಹರಿಸಿಲ್ಲ. ಸುಪ್ರೀಂಕೋರ್ಟ್‌ಆದೇಶದ ಪ್ರಕಾರಯಾವುದೇರೈತರನ್ನುಒಕ್ಕಲೆಬ್ಬಿಸದೇಕಾಯ್ದೆಯಡಿ ಪರೀಶೀಲಿಸಿ ಹಕ್ಕುಪತ್ರ, ಸಾಗುವಳಿ ಚೀಟಿ ನೀಡಬೇಕು.
ರಾಜ್ಯದಲ್ಲಿ ಲಕ್ಷಾಂತರ ಮಂದಿ ಸಾಗುವಳಿದಾರರು 3 ತಲೆ ಮಾರುಗಳಿಂದ ಭೂಮಿಯನ್ನು ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಅಲ್ಲದೆಅದನ್ನು ಸಕ್ರಮಗೊಳಿಸಲು ನಮೂನೆ 50,53,57 ರಲ್ಲಿಅರ್ಜಿ ಹಾಕಿದ ಸಾಗುವಳಿದಾರರಿಗೆ ಅರ್ಜಿ ಪರೀಶೀಲಿಸಿ ಸಾಗುವಳಿ ಚೀಟಿ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆಎಂದರು.
ಕರ್ನಾಟಕ ಪ್ರಾಂತರೈತ ಸಂಘದ ಕಾರ್ಯದರ್ಶಿ ಎಂ ಎಸ್ ಹಡಪದ ಮಾತನಾಡಿತಾಲ್ಲೂಕಿನಜನರು ಬಗರ್ ಹುಕುಂ ಸಾಗುವಳಿ ಮಂಜೂರಾತಿಗಾಗಿಅರ್ಜಿ ಸಲ್ಲಿಸಿ ಅನೇಕ ವರ್ಷಗಳು ಕಳೆದಿದೆ.
ಭೂಮಿ ಮಂಜೂರು ಮಾಡುವಂತೆ ಸರ್ಕಾರಿಆದೇಶಇದ್ದರೂ, ಭೂಮಿ ಮಂಜೂರು ಮಾಡಿಲ್ಲ. ತಾಲ್ಲೂಕಿನಲ್ಲಿ ಸಾವಿರಾರು ಅರ್ಜಿಗಳು ಇತ್ಯರ್ಥವಾಗಿಲ್ಲ. ಪುನಃ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕೊಡಬೇಕು. ಶಾಸಕರಅಧ್ಯಕ್ಷತೆಯಲ್ಲಿಇರುವ ಭೂ ಮಂಜೂರಾತಿ ಸಮಿತಿಯನ್ನುತಕ್ಷಣವೇಕರೆದು ಸಮಸ್ಯೆ ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ತಹಶೀಲ್ದಾರ ಕಿರಣಕುಮಾರ್‌ಕುಲಕರ್ಣಿ ಪ್ರತಿಭಟನೆಕಾರರ ಮನವಿ ಸ್ವೀಕರಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದುಎಂದರು.
ಈ ವೇಳೆ ಪೀರುರಾಠೋಡ, ಚೆನ್ನಪ್ಪಗುಗಲೋತ್ತರ, ದಾವಲಸಾಬ ತಾಳಿಕೋಟಿ, ಚಂದ್ರುರಾಠೋಡ, ಮೆಹಬೂಬ್ ಹವಾಲ್ದಾರ್, ಗಣೇಶ ಮಾಳೋತ್ತರ, ರೂಪ್ಲೇಶ ಮಾಳೋತ್ತರ, ವಿರೇಶರಾಠೋಡ, ಕುಮಾರರಾಠೋಡ, ಶಾಮಿದಸಾಬ ದಿಂಡವಾಡ, ದೀಪಲೇಪ್ಪರಾಠೋಡ, ದಿಂಡುರು ಚವಳವ್ವ ರಾಠೋಡಗುಬಾವ್ವರಾಠೋಡರೇಣವ್ವ ಗುಗಳೋತ್ತರ ಕೃಷ್ಣಪ್ಪ ಮಾಳೋತ್ತರ ಶಿವಪ್ಪ ಮಾಳೋತ್ತರ ಹರೇಶ, ಸೇರಿದಂತೆಗಜೇಂದ್ರಗಡ, ಬೈರಾಪೂರ, ಕಾಲಕಾಲೇಶ್ವರ, ಗೌಡಗೇರಿ,ರೈತರುಕೃಷಿಕೂಲಿಕಾರರು ಸೇರಿದಂತೆಇತರರುಇದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 