ಇಂಗ್ಲೀಷ್ ಭಾಷೆ ಸರಳೀಕರಿಸಿ ತಿಳಿಸುವುದು ಅಗತ್ಯ: ಅಧ್ಯಕ್ಷ ಪಾಟೀಲ
It is necessary to simplify and convey the English language: President Patil
ತಾಳಿಕೋಟಿ 18: ಇಂಗ್ಲಿಷ್ ಭಾಷೆಯನ್ನು ಅರ್ಥೈಸಿಕೊಳ್ಳುವುದು ನಮ್ಮ ಮಕ್ಕಳಿಗೆ ತೊಂದರೆಯಾಗುತ್ತದೆ ಅದರಲ್ಲೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ ಇಂಥಹ ಕಾರ್ಯಗಾರಗಳನ್ನು ಹಮ್ಮಿಕೊಳ್ಳುವುದರ ಮೂಲಕ ಆ ಕೆಲಸವನ್ನು ಮಾಡಬಹುದಾಗಿದೆ ಎಂದು ಎಸ್.ಎಸ್.ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲ ಹೇಳಿದರು.
ಪಟ್ಟಣದ ಎಸ್ ಎಸ್ ವಿದ್ಯಾ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡ ಇಂಗ್ಲಿಷ್ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಮುದ್ದೇಬಿಹಾಳ ವಿ.ಬಿ.ಸಿ.ಪ್ರೌಢಶಾಲೆಯ ವಾಗೇಶ ಹಿರೇಮಠ ಅವರು ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಯ ಶಿಕ್ಷಕರು ಕಾರ್ಯಾಗಾರದ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಎಸ್.ಎಸ್.ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲರು ಶಿಕ್ಷಕರಿಗೆ ಇಂಗ್ಲೀಷ್ ಭಾಷೆ ಕಬ್ಬಿಣದ ಕಡಲೆ ಇದ್ದ ಹಾಗೆ ,ಈ ಭಾಷೆಯನ್ನು ಸರಳಿಕರಿಸಿ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಹೇಳಿದರು.
ಅಧ್ಯಕ್ಷ ಎಚ್. ಎಸ್.ಪಾಟೀಲರಿಗೆ ವಿಷಯ ವೇದಿಕೆ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಎಸ್. ಠಾಣೇದರವರು ಮಿಶನ್ 45+ ಕುರಿತು ವಿಶ್ಲೇಸಿದರು. ಕಾರ್ಯಾಗಾರದ ವೇದಿಕೆಯಲ್ಲಿ ಪ್ರೌಢಶಾಲೆಯ ಸಹಶಿಕ್ಷಕರ ಸಂಘದ ಅಧ್ಯಕ್ಷರು ಎನ.ಬಿ ಪಿಂಜಾರ, ವಾಯ್.ಬಿ.ಬಡಿಗೇರ ಉಪಸ್ಥಿತರಿದ್ದರು. ಮುದ್ದೆಬಿಹಾಳ ಮತ್ತು ತಾಳಿಕೋಟಿ ತಾಲೂಕಿನ ಪ್ರೌಢಶಾಲೆಯ ಎಲ್ಲಾ ಇಂಗ್ಲಿಷ್ ಭಾಷೆಯ ಶಿಕ್ಷಕರು ಹಾಜರಿದ್ದರು. ಶಿಕ್ಷಕರಾದ ಆನಂದ ಹೂಗಾರ ವಂದಿಸಿದರು. ಎಸ್.ಸಿ.ಗುಡಗುಂಟಿ. ನಿರೂಪಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 