ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ: ಕಲಶೆಟ್ಟಿ
It is regrettable that moral qualities are decreasing among children: Kalashetty
ಸಿಂದಗಿ 16: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.
ಅವರು ಪಟ್ಟಣದ ಸಾತವಿರೇಶ್ವರ ಸಭಾಭವನದಲ್ಲಿ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಪದ್ಮರಾಜ ಪಬ್ಮಿಕ್(ಸಿಬಿಎಸ್‌ಸಿ)ಶಾಲೆ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಹೆಚ್ಚು ಸಂಸ್ಕಾರ ಕೊಡುವಲ್ಲಿ ಮುಂದಾಗಬೇಕು. ಶಿಕ್ಷಣದ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವುದು, ದಲೈಲಾಮಾ, ಮದರಥೇರೆಸಾ, ಅಬ್ದುಲ್ ಕಲಾಂ ಸೇರಿದಂತೆ ದಾರ್ಶನಿಕರು ತೋರಿಸಿದ ಮಾನವೀಯ ಕಾರ್ಯಗಳನ್ನು ಮಕ್ಕಳಿಗೆ ಕಥೆಗಳ ರೂಪದಲ್ಲಿ ತಿಳಿ ಹೇಳಬೇಕು. ಶಿಕ್ಷಕರು ಮಕ್ಕಳಿಗೆ ಆಟದೊಂದಿಗೆ ಪಾಠ ಕಲಿಸುವ ಪ್ರವೃತ್ತಿ ಮೈಗೂಡಿಸಿಕೊಂಡು ಬೋಧಿಸಿದಾಗ ತಮಗೂ ಶಿಕ್ಷಣದ ಮಹತ್ವ ತಿಳಿಯುವುದುರ ಜೊತೆಗೆ ಸರಳ ಬೋಧನೆಗೆ ಸಹಕಾರಿಯಾಗಲಿದೆ. ಪಾಲಕರು ಮಗುವಿನ ಸರ್ವಾಂಗಿಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು ಅವಶ್ಯ ಎಂದರು.
ಸಾನಿಧ್ಯವಹಿಸಿದ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ನಮ್ಮ ಜ್ಞಾನದಿಂದಲೆ ಸಮಾಜ ನಮ್ಮನ್ನು ಗುರುತಿಸುತ್ತದೆ. ಓದುವ ಹವ್ಯಾಸ ರೂಡಿಸಿಕೊಂಡರೆ ಆ ಓದು ನಮ್ಮನ್ನು ಮೇಲೆತ್ತುತ್ತದೆ. ಇಂದು ಮಕ್ಕಳಲ್ಲಿ ಜ್ಞಾನದ ಹಸಿವು ಕಡಿಮೆಯಾಗುತ್ತಿದೆ. ಶಾಲಾ ಕಾಲೇಜುಗಳು ಶಿಕ್ಷಣ ಮತ್ತು ಸಂಸ್ಕಾರದ ಕಡೆಗೆ ಹೆಚ್ಚು ಒತ್ತು ನೀಡಬೇಕು ಎಂದರು.
ಶಾಲೆಯ ಪ್ರಾಚಾರ್ಯ ದಾನಯ್ಯ ನಂದಿಕೋಲ ವಾರ್ಷಿಕ ವರದಿ ಮಂಡಿಸಿದರು. ವೇದಿಕೆ ಮೇಲೆ ಕಾರ್ಯಾಧ್ಯಕ್ಷೆ ರಾಣಿ ಜೋಗೂರ, ವಿದ್ಯಾರ್ಥಿ ಪ್ರತಿನಿಧಿಗಳಾದ ಪೂಜಾ ಮಠ, ಅನುಪವಮ್ಮಾ ಇದ್ದರು. ನಂತರ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಶಾಲೆಯ ಸಿಬ್ಬಂದಿಗಳಾದ ರೇಖಾ ಬಮ್ಮಣ್ಣಿ, ಅಕ್ಷತಾ ಕಿಣಗಿ, ಕಲಾವತಿ ಹಿರೇಮಠ, ಭಾರತಿ ಹಿರೇಮಠ, ಎಸ್.ಆರ್.ಹಾಲಕೇರಿ, ಎಸ್.ಎಸ್.ಪೊದ್ದಾರ, ವಿಜಯಲಕ್ಷ್ಮೀ ಚೌಧರಿ, ಅರುಣಾ ಕವಲಗಿ, ಶಶಿಕಲಾ ಹೂಗಾರ, ಸಂತೃಪ್ತಿ ಕಲಬುರ್ಗಿ, ಎಸ್.ಎಸ್.ಮಲ್ಲೇದ, ಅಭಿಷೇಕ ಬಿರಾದಾರ, ಸುರೇಶ ಸುಣಗಾರ, ಆಶೀಪ ಕೊಂಕಣಿ, ಶಿವಪುತ್ರ ಭಾಸಗಿ ಸೇರಿದಂತೆ ಪಾಲಕರು ಮಕ್ಕಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 