ಯುವ ಸಮೂಹ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ: ಬೆಳ್ಳಿ
It is regrettable that the youth are falling prey to drug addiction: Silver
ಯುವ ಸಮೂಹ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ: ಬೆಳ್ಳಿ
ಸಿಂದಗಿ 02: ರಾಷ್ಟ್ರದ ಭವಿಷ್ಯ ರೂಪಿಸಬೇಕಾಗಿರುವ ಯುವ ಸಮೂಹ ವ್ಯಸನಿಗಳ ಸಹವಾಸ ಹಾಗೂ ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.
ಸಿಂದಗಿ ಪಟ್ಟಣದ ಎಚ್‌ಜಿ ಕಾಲೇಜ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದುರ್ವ್ಯಸನ ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಇಂದಿನ ಯುವ ಪೀಳಿಗೆ ಮಾದಕ ಪದಾರ್ಥಗಳ ಗೀಳು ಅಂಟಿಸಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ ಹೊರಬರಲು ಸಾಧ್ಯವಿಲ್ಲ. ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜ ಕೂಡ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.
ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ, ಮಹಾವಿದ್ಯಾಲಯ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿದರು. ವೇದಿಕೆ ಮೇಲೆ ಪೊಲೀಸ್ ಸಿಬ್ಬಂದಿ ವಾಯ.ಸಿ.ಬನಸೋಡೆ, ಶಿಕ್ಷಣ ಇಲಾಖೆಯ ಎ.ಎಸ್.ಪಾಟೀಲ, ಸತೀಶ ಬಸರಕೋಡ ಇದ್ದರು. ಉಪನ್ಯಾಸಕ ಎಸ್.ಪಿ.ಬಿರಾದಾರ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ಸಿದ್ಧಲಿಂಗ ಕಿಣಗಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಶಾಲಾ ವಿದ್ಯಾರ್ಥಿಗಳಿಂದ ವ್ಯಸನ ಮುಕ್ತ ಆಂದೋಲನದ ಜಾಥಾ ನಡೆಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 