ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ
It is the duty of all of us to abolish the system of serfdom
ಶಿರಹಟ್ಟಿ 13 : ಸಮಾಜದಲ್ಲಿ ಹಲವಾರು ರೂಪಗಳಲ್ಲಿ ಇನ್ನೂ ಜೀತ ಪದ್ಧತಿಯು ಜೀವಂತವಾಗಿದೆ. ಈ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸತೀಶ ಎಂ. ಸದಸ್ಯ ಕಾರ್ಯದರ್ಶಿಗಳು, ತಾಲೂಕ ಕಾನೂನು ಸೇವಾ ಸಮಿತಿ, ಲಕ್ಷೇಶ್ವರ ಹಾಗೂ ದಿವಾಣಿ ನ್ಯಾಯಾಧೀಶರು ಅವರು ಹೇಳಿದರು.ಅವರು ಶುಕ್ರವಾರ ಪಟ್ಟಣದ ಎಫ್.ಎಂ.ಡಬಾಲಿ ಪ್ರೌಢಶಾಲೆಯಲ್ಲಿ ನೆಡೆದ ಜೀತ ಪದ್ಧತಿ ನಿರ್ಮೂಲನಾ ದಿನದ ಕುರಿತು ನೆಡೆದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಾ, ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಕ್ಕೆ ಸರ್ಕಾರ, ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಒಟ್ಟಾಗಿ ಸಹಕಾರ ನೀಡಬೇಕು ಎಂದರು.ಶಾಲಾ ಮಕ್ಕಳಿಗೆ ಉದ್ದೇಶಿಸಿ ಮಾತನಾಡಿದ ಅವರು, ನೀವು ಭವಿಷ್ಯದ ನಾಗರಿಕರು, ಯಾವುದೇ ರೀತಿಯ ಜೀತ ಪದ್ಧತಿಯ ಪ್ರಕರಣಗಳು ನಿಮ್ಮ ಗಮನಕ್ಕೆ ಬಂದಲ್ಲಿ, ಸಂಬಂಧಿಸಿದ ಇಲಾಖೆಗಳು ಹಾಗೂ ಸಹಾಯವಾಣಿಗಳಿಗೆ ಮಾಹಿತಿ ನೀಡಬೇಕು. ಇದರಿಂದ ಜೀತ ಪದ್ಧತಿಗೆ ಒಳಗಾದವರಿಗೆ ನ್ಯಾಯ ದೊರಕುವಂತ ವ್ಯವಸ್ಥೆ ನಿರ್ಮಾಣವಾಗುತ್ತದೆ ಎಂದು ಹೇಳಿದರು.ನಂತರ ಸಮಾಜವನ್ನು ಉತ್ತಮವಾಗಿ ಕಟ್ಟುವಲ್ಲಿ ಹಾಗೂ ಸಮಾಜದ ಕೆಟ್ಟ ಪಿಡುಗುಗಳನ್ನು ನಿರ್ಮೂಲನೆ ಮಾಡುವಲ್ಲಿ ಮಕ್ಕಳು ಹಾಗೂ ಸಮಾಜದ ನಾಗರಿಕರು ಕೈಜೋಡಿಸಬೇಕು ಎಂದು ನ್ಯಾಯಾಧೀಶರು ಸಭೆಯಲ್ಲಿ ಹಾಜರಿದ್ದ ಎಲ್ಲಾ ಮಕ್ಕಳು ಹಾಗೂ ಜನತೆಗೆ ಕರೆ ನೀಡಿದರು. ಈ ವೇಳೆಯಲ್ಲಿ ಆರ್.ಎಫ್.ಬಟಗುರಕಿ, ಮುಖ್ಯೋಪಾಧ್ಯಾಯರು, ಎಫ್.ಎಂ.ಡಬಾಲಿ ಪ್ರೌಢಶಾಲೆ ಕು. ಹೀನಾಕೌಸರ್ ಗಂಜಿಹಾಳ, ಸಹಾಯಕ ಸರ್ಕಾರಿ ಅಭಿಯೋಜಕರು, ಲಕ್ಷೇಶ್ವರ, ಈರ್ಪ ರಿತ್ತಿ, ಆರಕ್ಷಕ ಉಪ ನೀರೀಕ್ಷಕರು,ಎಸ್.ವೈ. ಗೊಬ್ಬರಗುಂಪಿ, ಅಧ್ಯಕ್ಷರು, ವಕೀಲರ ಸಂಘ, ಶಿರಹಟ್ಟಿ, ಹಾಗೂ ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 