ಸಂವಿಧಾನವು ಶ್ರೇಷ್ಠ ಪರಿಪಾಲನೆ ಮತ್ತು ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ: ವಿಜಯಾ ಕೋರಿಶೆಟ್ಟಿ
It is the duty of all of us to uphold and protect the Constitution: Vijaya Korishetty
ವಿಜಯಪುರ 27 : ನಮ್ಮ ಸಂವಿಧಾನವು ಶ್ರೇಷ್ಠ ಸಂವಿಧಾನವಾಗಿದ್ದು, ಅದರ ಪರಿಪಾಲನೆ ಮತ್ತು ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ. ಬಿ. ಆರ್.ಅಂಬೇಡ್ಕರ್ ಅದ್ಯಯನ ಕೇಂದ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾಕೇಂದ್ರ ಬೆಂಗಳೂರು ಇವರ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ 76ನೇ ಸಂವಿಧಾನ ದಿನಾಚರಣೆ ಅಂಗವಾಗಿ ‘ಡಾ.ಬಿ.ಆರ್.ಅಂಬೇಡ್ಕರ್ ಅಸ್ ಪೊಲಿಹಿಸ್ಟರ್’ ಎಂಬ ಶೀರ್ಷಿಕೆಯಡಿಯಲ್ಲಿ ಮೂರು ದಿನದ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ಭಾರತೀಯ ನ್ಯಾಯ, ಸಮಾನತೆ, ಮತ್ತು ಮಾನವ ಘನತೆಯನ್ನು ಎತ್ತಿ ಹಿಡಿಯುವಂತಹ ಮತ್ತು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಎಮ್.ಬಾಯಿನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳನ್ನು ಪ್ರಾರಂಭಿಸಿರುವುದು ಶ್ಲಾಘನೀಯ ಬೆಳವಣಿಗೆ ಎಂದು ಹೇಳಿದರು.
ಸರ್ಕಾರಗಳ ಇಂತಹ ಕ್ರಮಗಳು ಜನರಲ್ಲಿ ಸಂವಿಧಾನದ ಬಗೆಗಿನ ಅರಿವು ಹಾಗೂ ತಿಳುವಳಿಕೆಯನ್ನು ವಿಸ್ತರಿಸಲು ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಪುಣೆಯ ಗೋಖಲೆ ಸಂಸ್ಥೆಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಕೈಲಾಶ ಥಾವರೆ ಮಾತನಾಡಿ, ಸಂವಿಧಾನದ ಪರಿಚಯವನ್ನು ನೀಡುತ್ತಾ, ಆರ್ಟಿಕಲ್ 32 ಸಂವಿಧಾನದ ಆತ್ಮವಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಹೇಳಿದ್ದರ ಅರ್ಥವನ್ನು ಸವಿಸ್ತಾರವಾಗಿ ವಿವರಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾಗಿರಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 