ಕನ್ನಡ ನಾಡು-ನುಡಿ ಸಂಸ್ಕೃತಿ ಪರಂಪರೆಯನ್ನು ರಕ್ಷಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರದ್ದು : ಡಾ.ಚಂದ್ರಶೇಖರ ಹೆಗಡೆ
It is the responsibility of every Kannadigas to protect and nurture the cultural heritage of their
ಬಾಗಲಕೋಟೆ 10: ಪ್ರಸ್ತುತ ದಿನಗಳಲ್ಲಿ ಕನ್ನಡ ನಾಡು-ನುಡಿ ಸಂಸ್ಕೃತಿ ಪರಂಪರೆಯನ್ನು ರಕ್ಷಿಸಿ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ ಎಂದು ಖ್ಯಾತ ಸಾಹಿತಿಗಳಾದ ಡಾ.ಚಂದ್ರಶೇಖರ ಹೆಗಡೆಯವರು ತಿಳಿಸಿದರು. ಅವರು ಇಲ್ಲಿನ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗ ಕನ್ನಡ ಸ್ನಾತಕೋತ್ತರ ವಿಭಾಗ ಸಾಂಸ್ಕೃತಿಕ ವಿಭಾಗ, ಐ ಕ್ಯೂ ಎ ಸಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರಿ್ಡಸಿದ್ದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭ ದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಅನೇಕ ಕವಿ ಸಾಹಿತಿಗಳು ಹುಟ್ಟಿ ಬೆಳೆದ ನಾಡಿನಲ್ಲಿ ನಾವು ಹುಟ್ಟಿ ಬೆಳೆದಿರುವುದೇ ಅದೃಷ್ಟದ ಸಂಕೇತವಾಗಿದೆ. ಭಾರತ ದೇಶದಲ್ಲಿ ಹುಟ್ಟಿದವರು ಪುಣ್ಯ ಮಾಡಿ ಹುಟ್ಟಿ ರುತ್ತಾರೆ ಅದೇ ಕರ್ನಾಟಕ ರಾಜ್ಯದಲ್ಲಿ ಹುಟ್ಟಿದವರು ತಪಸ್ಸು ಮಾಡಿ ಹುಟ್ಟಿರುತ್ತಾರೆ. ಎಂದು ಅವರು ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯರಾದ ಪ್ರೊ ಎಸ್ ಆರ್ ಮೂಗನೂರು ಮಠ ಇವರು ಮಾತನಾಡುತ್ತಾ. ಕರ್ನಾಟಕ ಏಕೀಕರಣಕ್ಕಾಗಿ ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ. ಮತ್ತು ಕನ್ನಡ ಭಾಷೆಯನ್ನು ಲಿಪಿಗಳ ರಾಣಿ ಎಂದು ಕರೆಯುತ್ತಾರೆ. ಎಂದು ಅವರು ತಿಳಿಸಿದರು. ಸಮಾರಂಭದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ ಆರ್ ನಾಗರಾಜ್ ರವರು ಸ್ವಾಗತಿಸಿದರು ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಎಸ್ ಡಿ ಕೆಂಗಲಗುತ್ತಿಯವರು ಪ್ರಸ್ತಾವಿಕ ನುಡಿಗಳನಾಡಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ ಎನ್ ಬಿ ವಿರುಪಾಕ್ಷಿಯವರು ವಂದಿಸಿದರು ಪ್ರೊಫೆಸರ್ ಶ್ರೇಯಾ ಜೋರಾಪುರ ಹಾಗೂ ಪ್ರೊಫೆಸರ್ ಸಂಗೀತ ಪವಾರ್ ಇವರು ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಸಂಪಾದಿಸುತ್ತಿರುವ "ಕಲಾವಾಣಿ" ಪಾಕ್ಷಿಕ ಪತ್ರಿಕೆಯ ವಾರ್ಷಿಕ ಸಂಚಿಕೆಯನ್ನು ಸಹ ಬಿಡುಗಡೆ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 