ಜ. 25ರಂದು ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಸಂಗೀತ ಸಂಜೆ
J. Musical evening at Bharatesh Educational Institution on 25th
ಜ. 25ರಂದು ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಸಂಗೀತ ಸಂಜೆ
ಬೆಳಗಾವಿ 17: ಕಳೆದ 65 ವರ್ಷಗಳಿಂದ ಉತ್ತರ ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಭರತೇಶ ಶಿಕ್ಷಣ ಸಂಸ್ಥೆಯ ವತಿಯಿಂದ ಇದೇ ಜನೇವರಿ 25ರಂದು ಸಾಯಂಕಾಲ 4 ಗಂಟೆಗೆ ಬಸವನ ಕುಡಚಿಯ ಕ್ಯಾಂಪಸನಲ್ಲಿ ಖ್ಯಾತ ಸಂಗೀತಕಾರರಿಂದ ಸಂಗೀತ ಸಂಜೆಯನ್ನು ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಅವರು ಇಂದಿಲ್ಲಿ ಹೇಳಿದರು.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಗೀತ ಸಂಜೆ ವೈಬ್ಸ ಎಂಬ ಹೆಸರಿಡಲಾಗಿದ್ದು, ಈ ಸಂಗೀತ ಸಂಜೆಯಲ್ಲಿ ಶಾಸ್ತ್ರೀಯ ಸಂಗೀತ, ಬಾಲಿಯುಡ್ ಸಂಗಿತ ಕ್ಷೇತ್ರದ ಹಿನ್ನಲೆ ಗಾಯಕರಾದ ಶಂಕರ್ ಮಹಾದೇವನ್ ಅವರ ಪುತ್ರರಾದ ಶಿವಂ ಮತ್ತು ಸಿದ್ದಾರ್ಥ ಅವರು ಸಂಗೀತ ಸಂಜೆಯನ್ನು ನಡೆಸಿಕೊಡಲಿದ್ದಾರೆ ಎಂದು ಅವರು ತಿಳಿಸಿದರು.
ಈ ಸಂಗೀತ ಸಂಜೆಯಲ್ಲಿ ಶಾಸ್ತ್ರೀಯ ಸಂಗೀತ, ರಾಕ್ ಸಂಗೀತ, ಹಿಂದೂಸ್ಥಾನಿ ಸಂಗೀತ, ಬಾಲಿವುಡ್ ಸಂಗೀತದ ರಸದೌತನವನ್ನು ನೀಡಲಿದ್ದಾರೆ. ಕಳೆದ ಸಾಲಿನಲ್ಲಿಯೂ ಸಹ ಸಾಚೇತ ಅವರ ಸಂಗೀತ ಸಂಜೆಯನ್ನು ಆಯೋಜಿಸಲಾಗಿತ್ತು. ಈ ಬಾರಿಯ ಸಂಗೀತ ಕಾರ್ಯಕ್ರಮ ಯುವ ವರ್ಗಕ್ಕೆ ಹೊಸ ಪ್ರೇರಣೆ ನೀಡಲಿದೆ ಎಂದು ಹೇಳಿದ ಅವರು, ಈ ಕಾರ್ಯಕ್ರಮವನ್ನು ಚಂದುಕಾಕಾ ಸರಾಫ ಜ್ಯುವೆಲ್ಸ್ ಮತ್ತು ಐಟಿಸಿ ವೆಲಕಮ್ ಗ್ರುಫ ಅವರು ಪ್ರಾಯೋಜಿಸಿದ್ದಾರೆ ಎಚಿದು ಅವರು ತಿಳಿಸಿದರು.
ಕಾರ್ಯಕ್ರಮವನ್ನು ವೀಕ್ಷಿಸುವ ಬಯಸುವವರು ಭರತೇಶ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಗಳನ್ನು ಸಂಪರ್ಕಿಸಬಹುದು. ಅಥವಾ ಮೊ: 9071021777 ಇಲ್ಲಿ ಸಂಪರ್ಕಿಸಿ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಶ್ರೀಪಾಲ ಖೆಮಲಾಪೂರೆ, ಆಡಳಿತ ಮಂಡಳಿಯ ಸದಸ್ಯರಾದ ಹೀರಾಚಂದ ಕಲಮನಿ, ಡಾ. ಸಾವಿತ್ರಿ ದೊಡ್ಡಣ್ಣವರ, ಅನುಪಮಾ ಶಿರಹಟ್ಟಿ, ಕೀರ್ತಿ ದೊಡ್ಡಣ್ಣವರ ಮೊದಲಾದವರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 