ಜ. 11ರಂದು ರುದ್ರ್ಪ ಲಮಾಣಿ ಅವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ
ಹಾವೇರಿ 10: ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆಯಾದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇವರು ಕೊಡಮಾಡುವ ಅತ್ಯುನ್ನತ ಪ್ರತಿಷ್ಠಿತ ಕ್ಲಬ್ ಪ್ರಶಸ್ತಿಯಾದ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಯನ್ನು ವಿಧಾನಸಭಾ ಉಪಸಭಾಧ್ಯಕ್ಷರಾದ ರುದ್ರ್ಪ ಲಮಾಣಿ ಇವರಿಗೆ ನೀಡಲು ನಿರ್ಧರಿಸಿದ್ದಾರೆ. ಜನವರಿ 11ರ ಶನಿವಾರ ಸಂಜೆ 5.00 ಗಂಟೆಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದೇವೆ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್ ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.