ಜೆಜೆಎಂ ಕಾಮಗಾರಿ ಪರೀಶೀಲನೆ, ಬೇಟಿಸಿ :ಇಒ ಭುವನೇಶ್
JJM work review, visit: EO Bhuvanesh
ಜೆಜೆಎಂ ಕಾಮಗಾರಿ ಪರೀಶೀಲನೆ, ಬೇಟಿಸಿ :ಇಒ ಭುವನೇಶ್
ಧಾರವಾಡ, 31 ; ಜಿಲ್ಲೆಯ ಅಣ್ಣಿಗೆರಿ ತಾಲ್ಲೂಕಿನ ಶಿಶ್ವಿನಹಳ್ಳಿಯ ಮತ್ತು ನಲವಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ, ಬಲ್ಲರವಾಡ, ಬೆನ್ನೂರ ಮತ್ತು ದುಂದೂರ ಗ್ರಾಮಗಳಲ್ಲಿ ಜಲ್ ಜೀವನ್ ಮಿಷನ್ ಗ್ರಾಮೀಣ ಯೋಜನೆಯಡಿ ಕೈಗೊಂಡಿರುವ ಹಲವು ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಪಾಟೀಲ್ ಭುವನೇಶ್ ದೇವಿದಾಸ್ ರವರು ಗುರುವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ನಾಗರಹಳ್ಳಿ ಗ್ರಾಮದಲ್ಲಿ ಜೆಜೆಎಂ ನಲ್ಲಿಗಳಲ್ಲಿ ನೀರು ಸೋರುವುದನ್ನು ಗಮನಿಸಿದ ಸಿಇಒ, ನೀರು ಸೋರುವಿಕೆಯನ್ನು ತಡೆಗಟ್ಟಬೇಕು. ಗ್ರಾಮದ ಪ್ರತಿ ಮನೆಗೂ ಕುಡಿಯುವ ನೀರು ಸರಬರಾಜು ಮಾಡುವಂತೆ ಸೂಚಿಸಿದರಲ್ಲದೇ, ಬಲ್ಲರವಾಡ ಗ್ರಾಮದಲ್ಲಿನ ನೀರಿನ ಸಂಪರ್ಕಗಳನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದರು.
ನಂತರ ಬೆನ್ನೂರ ಜೆಜೆಎಂ ಯೋಜನೆಯಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ನೀರು ಸರಬರಾಜು ವ್ಯವಸ್ಥೆಯಲ್ಲಿನ ಚಿಕ್ಕ ಪುಟ್ಟ ದುರಸ್ತಿ ಕಾರ್ಯಗಳನ್ನು ಕೈಗೊಂಡು ದಿನದ 24 ಗಂಟೆ ಶುದ್ದ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮವಹಿಸುವಂತೆ ಪಿಡಿಒ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಂಡಿರುವ ಗ್ರಾಮಗಳಲ್ಲಿ ತೀವ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು ಎಂದು ಹೇಳಿದ ಅವರು, ಜಲಮೂಲಗಳು, ಜಲ ಸಂಗ್ರಹಾಗಾರಗಳನ್ನು ಸ್ವಚ್ಛವಾಗಿರಿಸುವಲ್ಲಿ ನಿಗಾವಹಿಸಬೇಕು. ಆಗಾಗ ಪೀಲ್ಡ್ ಟೆಸ್ಟ್ ಕಿಟ್ ಬಳಸಿ ಕುಡಿಯುವ ನೀರಿನ ಶುದ್ಧತೆಯನ್ನು ಪರೀಕ್ಷಿಸಬೇಕು. ಗ್ರಾಮ ನೀರು ನೈರ್ಮಲ್ಯ ಸಮಿತಿಗಳ ಸಭೆಗಳನ್ನು ನಡೆಸುವಂತೆ ತಿಳಿಸಿದರು.
ಬಳಿಕ ದುಂದೂರಿನ ಗ್ರಾಮದ ಸರ್ಕಾರಿ ಶಾಲೆ ಭೇಟಿ ನೀಡಿ, ಮಕ್ಕಳು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ರೊಂದಿಗೆ ಸಮಾಲೋಚನೆ ನಡೆಸಿದ ಅವರು, ಶಾಲೆಯಲ್ಲಿ ಬಿಸಿಯೂಟ, ಮೊಟ್ಟೆ ಹಾಗೂ ಪೌಷ್ಠಿಕ ಆಹಾರ ನೀಡುವ ಬಗ್ಗೆ ನರೇಗಾ ಯೋಜನೆಯಡಿ ಹೈಟಕ್ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ವೀಕ್ಷಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ್, ಅಣ್ಣೀಗೆರಿ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಬಡೆಖಾನ್, ಸಹಾಯಕ ನಿರ್ದೇಶಕರು, ಅಭಿಯಾಂತರು, ಶಿಕ್ಷಕರು, ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಪಿಡಿಒ, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 