ಅರಭಾಂವಿಮಠದ ಜಗದ್ಗುರು ದುರದುಂಡೀಶ್ವರ ಯಾತ್ರಾ ಮಹೋತ್ಸವ: ಗುರುವಂದನಾ, ಧರ್ಮ ಚಿಂತನ ಗೋಷ್ಠಿ ಕಾರ್ಯಕ್ರಮ
ಘಟಪ್ರಭಾ 09: ಮನುಷ್ಯ ಜನ್ಮ ಅತ್ಯಂತ ಶ್ರೇಷ್ಠವಾಗಿದ್ದು, ಪ್ರತಿಯೊಬ್ಬರು ಸಮಾಜ ಮುಖಿಯಾಗಿ ಜೀವನ ಸಾಗಿಸಿದರೆ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ಅವರು ಸಮೀಪದ ಅರಭಾಂವಿಮಠದ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಸಂಸ್ಥಾನಮಠದ ಯಾತ್ರಾ ಮಹೋತ್ಸವ ನಿಮಿತ್ಯ ಹಮ್ಮಿಕೊಳ್ಳಲಾದ ಗುರುವಂದನಾ ಸಮಾರಂಭ ಹಾಗೂ ಧರ್ಮ ಚಿಂತನ ಗೋಷ್ಠಿ ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ವಹಿಸಿ ಮಾತನಾಡಿದರು. ಮನುಷ್ಯನಿಗೆ ಗುರುವಿನ ಮಾರ್ಗದರ್ಶನ ಅತ್ಯಂತ ಅವಶ್ಯಕ ಹಾಗಾಗಿ ಸದಾಕಾಲ ಗುರುವಿನ ಮಹಾತ್ಮೆಯನ್ನು ಆಲಿಸುತ್ತ ಬದುಕನ್ನು ಸಾಗಿಸಬೇಕು ಆ ಮೂಲಕ ಬದುಕಿನ ಜಂಜಾಟಗಳಿಂದ ಮುಕ್ತಿ ಹೊಂದಲು ಸಾಧ್ಯವೆಂದು ಹೇಳಿದರು.
ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದ ಹಂದಿಗುಂದದ ಶಿವಾನಂದ ಮಹಾಸ್ವಾಮಿಗಳು ಮಾತನಾಡಿ ಪುಣ್ಯಕ್ಷೇತ್ರಗಳಿಗೆ, ಮಹಾತ್ಮರ ಸನ್ನಿಧಾನಕ್ಕೆ ಬರುವಾಗ ಭವ ಬಂಧನದಿಂದ ಮುಕ್ತರಾಗಿ ನಿರ್ಮಲ ಹೃದಯದವರಾಗಿ ಮಹಾತ್ಮರ ಸೇವೆಯನ್ನು ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಘಟಪ್ರಭಾ ಗುಬ್ಬಲಗುಡ್ಡ ಮಠದ ಮಲ್ಲಿಕಾಜರ್ುನ ಮಹಾಸ್ವಾಮಿಗಳು ಮಾತನಾಡಿ, ಸಮಾಜಕ್ಕೆ ದೇಶಕ್ಕೆ ಸಂಸ್ಕೃತಿ ಎಂಬುದು ತುಂಬಾ ಮುಖ್ಯ. ಅಂತಹ ಸಂಸ್ಕೃತಿ ಸಂಸ್ಕಾರವನ್ನು ಇಂದು ಮಠಗಳಲ್ಲಿ ಮಾತ್ರ ಕಾಣಬಹುದಾಗಿದೆ. ಅದಕ್ಕೆ ಸಾಕ್ಷಿ ನಮ್ಮ ದುರದುಂಡೀಶ್ವರ ಪುಣ್ಯಾರಣ್ಯ ಮಠ ಎಂದರು.
ಕಾರ್ಯಕ್ರಮದಲ್ಲಿ 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವಾನಂದ ಕೌಜಲಗಿ ಹಾಗೂ ಡ್ರಾಮಾ ಜೂನಿಯರ್ಸ ಸೀಜನ್ 3ರ ವಿಜೇತೆ ಸ್ವಾತಿ ನಿಪನಾಳ ಅವರನ್ನು ಸನ್ಮಾನಿಸಲಾಯಿತು.
ಕಡಕೋಳ ವಿರಕ್ತಮಠದ ಸಚ್ಚಿದಾನಂದ ಮಹಾಸ್ವಾಮಿಗಳು, ಬೆಂಗಳೂರು ಶಿವಯೋಗೀಶ್ವರ ಮಠದ ಮಲ್ಲಿಕಾಜರ್ುನ ಮಹಾಸ್ವಾಮಿಗಳು, ಕಡೋಲಿ ವಿರಕ್ತಮಠದ ಗುರುಬಸವಲಿಂಗ ಮಹಾಸ್ವಾಮಿಗಳು, ಹುಕ್ಕೇರಿ ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು, ಘಟಪ್ರಭಾ ಹೊಸಮಠದ ವಿರುಪಾಕ್ಷಿ ದೇವರು, ಶೇಗುಣಸಿ ವಿರಕ್ತಮಠದ ಮಹಾಂತದೇವರು ಉಪಸ್ಥಿತರಿರುವರು.
ಶಿವಯ್ಯಾ ಶಾಸ್ತ್ರಿಗಳು ಸ್ವಾಗತಿಸಿದರು. ಸುರೇಶ ಮುದ್ದಾರ ನಿರೂಪಿಸಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 