ಜಗದೀಪ್ ಧನ್ಕರ್ ಆರೋಗ್ಯದಲ್ಲಿ ಏರುಪೇರು
Jagdeep Dhankar's health is fluctuating.
ನವದೆಹಲಿ: ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಸೋಮವಾರ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (AIIMS) ದಾಖಲಿಸಲಾಗಿದೆ.
ಕಳೆದ ವಾರ ಅವರು ಎರಡು ಬಾರಿ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ, ಹೆಚ್ಚಿನ ತಪಾಸಣೆಗಾಗಿ ವೈದ್ಯರು ದಾಖಲಾಗಲು ಸೂಚಿಸಿದ್ದಾರೆ.
ಜನವರಿ 10ರಂದು ಧನ್ಕರ್ ಅವರು ಶೌಚಾಲಯಕ್ಕೆ ತೆರಳಿದ್ದಾಗ ಎರಡು ಬಾರಿ ಪ್ರಜ್ಞೆ ತಪ್ಪಿ (Blackout) ಬಿದ್ದಿದ್ದರು ಎನ್ನಲಾಗಿದೆ. ಇಂದು ಅವರು ಸಾಮಾನ್ಯ ತಪಾಸಣೆಗಾಗಿ ಏಮ್ಸ್ಗೆ ತೆರಳಿದ್ದಾಗ, ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿದ ವೈದ್ಯರು ತಕ್ಷಣವೇ ದಾಖಲಿಸಿಕೊಂಡು MRI ಸ್ಕ್ಯಾನಿಂಗ್ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಒಳಪಡಿಸಲು ನಿರ್ಧರಿಸಿದ್ದಾರೆ.
ಜಗದೀಪ್ ಧನ್ಕರ್ ಅವರು ಈ ಹಿಂದೆಯೂ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಿದ್ದಾಗ ಹಲವು ಬಾರಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಇದೇ ಆರೋಗ್ಯದ ಕಾರಣಗಳನ್ನು ನೀಡಿ ಅವರು ಕಳೆದ ಜುಲೈ 21ರಂದು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪ್ರಸ್ತುತ ಏಮ್ಸ್ನ ಹಿರಿಯ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದು, ಪರೀಕ್ಷಾ ವರದಿಗಳ ನಂತರ ಮುಂದಿನ ಚಿಕಿತ್ಸೆಯ ಬಗ್ಗೆ ಮಾಹಿತಿ ಲಭ್ಯವಾಗಲಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 