ಜಲಾನಯನ ಯಾತ್ರೆ: “ಜಲಾನಯನ ಮಾರ್ಗದರ್ಶಕರು” ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸನ್ಮಾನ
ಬಳ್ಳಾರಿ 18: ಚೆಳ್ಳಗುರ್ಕಿ ಗ್ರಾಮ ಪಂಚಾಯಿತಿಯ ಜೋಳದರಾಶಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಹಿ ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ “ಜಲಾನಯನ ಯಾತ್ರೆ” ಕಾರ್ಯಕ್ರಮ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಈ ಯೋಜನೆಯನ್ನು ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಗ್ರಾಮ ಪಂಚಾಯಿತಿಯ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಜಲಾನಯನ ಸಹಾಯಕರು, ಎಲ್‌ಸಿಆರ್‌ಪಿ, ಎಂಬಿಕೆ ಮತ್ತು ಕೃಷಿ ಸಖಿಯರಿಗೆ “ಜಲಾನಯನ ಮಾರ್ಗದರ್ಶಕರು” ಎಂದು ಗೌರವ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಕೆ.ಎಂ.ಸೋಮಸುಂದರ್, ಸಹಾಯಕ ಕೃಷಿ ನಿರ್ದೇಶಕ ಎಂ.ದಯಾನಂದ, ಚೆಳ್ಳಗುರ್ಕಿ ಗ್ರಾಮ ಪಂಚಾಯಿತಿಯ ಮಾಜಿ ಹಾಗೂ ಹಾಲಿ ಅಧ್ಯಕ್ಷರು ಮತ್ತು ಸದಸ್ಯರು, ಜಲಾನಯನ ಕಾರ್ಯಕಾರಿ ಸಮಿತಿಯ ಮಾಜಿ ಹಾಗೂ ಹಾಲಿ ಅಧ್ಯಕ್ಷರು ಮತ್ತು ಸದಸ್ಯರು, ರೈತರು, ಸ್ವ-ಸಹಾಯ ಸಂಘಗಳ ಮಹಿಳೆಯರು ಪಾಲ್ಗೊಂಡಿದ್ದರು.