ತಾಯಿ ಹೃದಯದ ಡಾ.ಪ್ರಭುಗೌಡ ಗೆ ಜನನಿ ಪ್ರಶಸ್ತಿ ಪ್ರದಾನ
ದೇವರಹಿಪ್ಪರಗಿ, 10; ಸುಮಾರು 3 ದಶಕಗಳ ಕಾಲ ವೈದ್ಯಕೀಯ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಉತ್ತರ ಕರ್ನಾಟಕ ಭಾಗದ ಸುಮಾರು 50 ಸಾವಿರಕ್ಕೂ ಹೆಚ್ಚು ಜನರ ಅಂದರ ಬಾಳಿಗೆ ಬೆಳಕಾದ ಖ್ಯಾತ ನೇತ್ರತಜ್ಞ ವಿಜಯಪುರ ಹಾಗೂ ಕಲಬುರ್ಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ತಾಯಿ ಹೃದಯದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅವರಿಗೆ ಜನನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ರವಿವಾರದಂದು ಹತ್ತಿ ಗುಡೂರ ಮಾತೋಶ್ರೀ ಬಸಮ್ಮ ಶರಬಣ್ಣ ಮಹಾಮನಿ ಸೇವಾ ಸಮಿತಿ ವತಿಯಿಂದ ಸೇವಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ಜನನಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಗಳಾದ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅವರು ಉತ್ತರ ಕರ್ನಾಟಕ ಭಾಗದಲ್ಲಿ ಸಹಸ್ರಾರು ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ನೀಡುವ ಮೂಲಕ ಅಂದರ ಬಾಳಿಗೆ ಬೆಳಕಾಗಿದ್ದಾರೆ. ಹಲವಾರು ಜನ ರಸ್ತೆಯಲ್ಲಿ ಅಪಘಾತವಾದಗ ಆಸ್ಪತ್ರೆಗೆ ಸೇರಿಸಿ ಅವರ ಜೀವ ರಕ್ಷಿಸಿ ಆಪತ್ಕಾಲದಲ್ಲಿ ಆಪತ್ಬಾಂಧವರಾಗಿ ಕೆಲಸ ಮಾಡಿದ್ದಾರೆ. ಕ್ಷೇತ್ರದ ಬಡ ಜನರಿಗೆ ಸಹಾಯ ಸಹಕಾರ ನೀಡುವ ಮೂಲಕ ಅಭಯ ಹಸ್ತವನ್ನು ಚಾಚಿದ್ದಾರೆ. ಅಧಿಕಾರ ಇಲ್ಲದಿದ್ದರೂ ದೇವರಹಿಪ್ಪರಗಿ ಮತಕ್ಷೇತ್ರದ ಬಡ, ದಿನ ದಲಿತರ, ಅಲ್ಪಸಂಖ್ಯಾತರ, ಯವ ಜನರ ಆಶಾಕಿರಣವಾಗಿ ಕಷ್ಟದಲ್ಲಿರುವವರಿಗೆ ಸಹಾಯ ಸಹಕಾರ ನೀಡುವ ಮೂಲಕ ಸರ್ಕಾರ ಹಾಗೂ ಜನರ ಮಧ್ಯೆ ಕೆಲಸ ಮಾಡುತ್ತಿದ್ದಾರೆ. ತಾಯಿ ಹೃದಯದ ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ ಅವರಿಗೆ ಕನ್ನಡ ರಾಜ್ಯೋತ್ಸವ, ಸುವರ್ಣ ಹಾಗೂ ಕನ್ನಡ ಪ್ರಭ ವತಿಯಿಂದ ನೀಡಲಾಗುವ ಸುವರ್ಣ ಕನ್ನಡಿಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ ಅದೇ ರೀತಿ ಅವರ ಸೇವೆಯನ್ನು ಗುರುತಿಸಿ ಜನನಿ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ಜಿಲ್ಲೆಯ ಹಾಗೂ ತಾಲೂಕು ಮುಖಂಡರು ಸಾರ್ವಜನಿಕರು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಿರಿಯ ಕಲಾವಿದರಾದ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಹಲವಾರು ಹಾಸ್ಯ ಕಲಾವಿದರು, ಗಣ್ಯರು ಹಾಗೂ ಮುಖಂಡರು ಜನನಿ ಪ್ರಶಸ್ತಿ ಪುರಸ್ಕೃತರಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅವರ ಸೇವೆಯನ್ನು ಶ್ಲಾಘಿಸಿದ್ದಾರೆ