ಫೆ. 27 ರಂದು ವಿಜಯಪೂರದಲ್ಲಿ ಜನತಾದಳದಿಂದ ಬೃಹತ್ ಜನತಾ ಸಮಾವೇಶ
Janata Dal to hold massive public rally in Vijayapura on Feb. 27
ಕಾಗವಾಡ 14: ಜಾತ್ಯಾತೀತ ಜನತಾದಳ ಪಕ್ಷ 25 ವರ್ಷಗಳನ್ನು ಪೂರೈಸಿರುವ ಏಕೈಕ ಪ್ರಾದೇಶಿಕ ಪಕ್ಷವಾಗಿದೆ. ಈ ನಿಮಿತ್ಯ ರಾಜ್ಯದ ವಿವಿಧ ಕಡೆ ಜನತಾ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮುಂಬರುವ ಫೆ. 27 ರಂದು ವಿಜಯಪೂರ ನಗರದಲ್ಲಿ ಕಿತ್ತೂರು ಕರ್ನಾಟಕ ಮಟ್ಟದ ಬೃಹತ್ ಜನತಾ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ರಾಜ್ಯ ಉಪಾಧ್ಯಕ್ಷ ಶಹಾಜಾನ ಡೊಂಗರಗಾಂವ ಮತ್ತು ಬೆಳಗಾವಿ ಜಿಲಾಧ್ಯಕ್ಷ ಶಂಕರ ಮಾಡಲಗಿ ಆಗ್ರಹಿಸಿದ್ದಾರೆ. ಅವರು, ಶನಿವಾರ ದಿ. 14 ರಂದು ಪಟ್ಟಣದ ಲಕ್ಷ್ಮಿ ಸಹಕಾರಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಕೇಂದ್ರದ ಎನ್‌ಡಿಎ ಕೂಟದ ಮಿತ್ರ ಪಕ್ಷವಾಗಿರುವ ಜೆಡಿಎಸ್ ಪಕ್ಷ ಮುಂದಿನ ಎಲ್ಲ ಚುನಾವಣೆಗಳನ್ನು ಬಿಜೆಪಿಯ ಮೈತ್ರಿಯೊಂದಿಗೆ ಎದುರಿಸಲಿದೆ.
ಕಳೆದ ಮೂರು ವರ್ಷಗಳಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಅಭಿವೃದ್ಧಿ ಕುಂಠಿತಗೊಂಡಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ದಿನಾ ಬೆಳಗಾದರೇ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಮಧ್ಯ ಆಂತರಿಕ ಕಿತ್ತಾಟ ಜೋರಾಗಿದೆ. ಆಡಳಿತ ಯಂತ್ರ ಸಂಪೂರ್ಣವಾಗಿ ಹದೆಗೆಟ್ಟಿದೆ. ಹಿಪ್ಪರಗಿ ಗೇಟ್ ಮುರಿದು, ಕೃಷ್ಣಾ ನದಿಯಿಂದ ಸುಮಾರು 2.5 ಟಿಎಂಸಿ ನೀರು ಪೊಲಾಗಿ ಈ ಭಾಗದ ಜನರಿಗೆ ನೀರಿನ ಗಂಭೀರ ಸಮಸ್ಯೆ ಎದುರಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಜನರು ಕಾಂಗ್ರೆಸ್ ಸರ್ಕಾರಕ್ಕೆ ಬೇಸತ್ತಿದ್ದಾರೆ. ಆದ್ದರಿಂದ ಮುಂಬರುವ ವಿಧಾನಸಭೆ ಚುನವಾಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ಮುಖಂಡರಾದ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾಗ ಬಹಳಷ್ಟು ಜನಪರ, ರೈತಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಮಾಜಿ ಪ್ರಧಾನಿ ದೇವಗೌಡರು ಮಾಡಿರುವ ರೈತರ ಸಾಲಮನ್ನಾಯೋಜನೆಗಳು ಜನರ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿವೆ. ಕುಮಾರಸ್ವಾಮಿಯವರ ಅಭಿವೃದ್ಧಿ, ದೂರದೃಷ್ಠಿ ಧೋರಣೆಗೆ ಮುಂದಿನ ದಿನಗಳಲ್ಲಿ ಜನರು ಆಶೀರ್ವಾದ ನೀಡಲಿದ್ದಾರೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ, ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಜನರಿಗೆ ತಿಳಿಸುವುದೇ ಈ ಜನತಾ ಸಮಾವೇಶದ ಉದ್ದೇಶವಾಗಿದೆ ಎಂದರು.
ಕೆ.ಪಿ. ಮಗ್ಗೇಣ್ಣವರ ಮಾತನಾಡಿ, ವಿಜಯಪೂರದಲ್ಲಿ ನಡೆಯುವ ಜನತಾ ಸಮಾವೇಶವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಈ ವೇಳೆ ಅಥಣಿ ಮಾಜಿ ಶಾಸಕ ಹಾಗೂ ರಾಜ್ಯ ಉಪಾಧ್ಯಕ್ಷ ಶಹಾಜಾನ ಡೊಂಗರಗಾಂವ, ಜೆಡಿಎಸ್ ಪಕ್ಷದ ಬೆಳಗಾವಿ ಜಿಲಾಧ್ಯಕ್ಷ ಶಂಕರ ಮಾಡಲಗಿ, ಸದಲಗಾ-ಚಿಕ್ಕೋಡಿ ಮಾಜಿ ಶಾಸಕ ಹಾಗೂ ಚಿಕ್ಕೋಡಿ ಜಿಲ್ಲಾಧ್ಯಕ್ಷ ಕೆ.ಪಿ. ಮಗ್ಗೆಣ್ಣವರ, ಚಿಕ್ಕೋಡಿ ಜಿಲ್ಲಾ ಎಸ್‌ಸಿ ಮೋರ್ಚಾದ ಅಧ್ಯಕ್ಷ ರಮೇಶ ನಾಯಿಕ, ಜಿಲ್ಲಾ ಸಂಚಾಲಕ ಪ್ರಮೋದ ಪೂಜಾರಿ, ಕಾಗವಾಡ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಗುಂಜಿಗಾಂವಿ, ಉಪಾಧ್ಯಕ್ಷ ಮಹಾಂತೇಶ ಅವಟಿ ಸೇರಿದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 