ಸಮಾಜದ ಮಾರ್ಗದರ್ಶನ ನೀಡುವವರು ಜಂಗಮರು: ಮಲ್ಲಿಕಾರ್ಜುನ ಶ್ರೀಗಳು
Jangamas are the guides of society: Mallikarjuna Shris
ಲೋಕದರ್ಶನ ವರದಿ
ಗದಗ, 30: ಸಂಸ್ಕಾರ, ಧರ್ಮಾಚರಣೆ ಹಾಗೂ ಸಮಾಜಮುಖಿ ಚಿಂತನೆ ಇರುವ ಸಮುದಾಯವೇ ಜಂಗಮ ಸಮಾಜ. ಜಂಗಮ ಬಂಧುಗಳು ತಮ್ಮ ಪರಂಪರೆ ಮತ್ತು ಸಂಸ್ಕಾರವನ್ನು ಮರೆಯಬಾರದು ಎಂದು ನರೇಗಲ್ಲಿನ ಪೂಜ್ಯಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಕೆಎಸ್ಆರಿ್ಟಸಿ ಡಿಪೋ ಹಿಂಭಾಗದಲ್ಲಿರುವ ಶ್ರೀ ಕುಮಾರೇಶ್ವರ ಧಾರ್ಮಿಕ ಪಾಠಶಾಲೆಯಲ್ಲಿ ಭಾನುವಾರ ಅಖಿಲ ಭಾರತ ಜಂಗಮ ಸೇವಾ ಸಮಿತಿ, ಗದಗ ಹಾಗೂ ಪಂಚವಟಿ ಧಾರ್ಮಿಕ ಗುರುಕುಲ ಜನ ಕಲ್ಯಾಣ ಟ್ರಸ್ಟ್, ನರಸಾಪುರ-ಗದಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪದಾಧಿಕಾರಿಗಳ ಪದಗ್ರಹಣ, ಸಮಿತಿಯ ವಾರ್ಷಿಕೋತ್ಸವ ಹಾಗೂ ‘ಜಂಗಮಶ್ರೀ’ ಪ್ರಶಸ್ತಿ ಪ್ರದಾನ ಮತ್ತು ಉಟಿ ತುಂಬುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಂಗಮ ಸಮಾಜ ಶೈಕ್ಷಣಿಕ, ಧಾರ್ಮಿಕ ಹಾಗೂ ರಾಜಕೀಯವಾಗಿ ಹಿಂದುಳಿದಿಲ್ಲ. ಆದರೆ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ನೆರವು ನೀಡುವುದು ಸಮಾಜದ ಜವಾಬ್ದಾರಿಯಾಗಿದೆ. ದುಶ್ಚಟಗಳಿಂದ ಸಮಾಜ ಹಾಳಾಗುತ್ತಿದ್ದು, ವ್ಯಸನಮುಕ್ತ ಜೀವನ ನಡೆಸಿದಾಗ ಮಾತ್ರ ಸಮಾಜದಲ್ಲಿ ಗೌರವ ದೊರೆಯುತ್ತದೆ. ಜಗತ್ತಿನ ಉದ್ಧಾರಕ್ಕಾಗಿ ಶ್ರಮಿಸುವುದು ಜಂಗಮರ ಕರ್ತವ್ಯವಾಗಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹಾಳಾಗಿರುವ ಮಠಗಳನ್ನು ಅಭಿವೃದ್ಧಿಪಡಿಸಿ ಧಾರ್ಮಿಕ ಆಚರಣೆಗಳನ್ನು ಮುಂದುವರಿಸಬೇಕು. ಪಾಲಕರು ಮಕ್ಕಳಿಗೆ ಗ್ರಂಥಗಳನ್ನು ಓದಿಸುವ ಮೂಲಕ ಸಂಸ್ಕಾರ ಮತ್ತು ಧರ್ಮಾಚರಣೆಯ ಮಹತ್ವವನ್ನು ತಿಳಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಜಿಲ್ಲಾ ಗ್ರಾಹಕರ ನ್ಯಾಯಪೀಠದ ನಿವೃತ್ತ ಸದಸ್ಯ ಎಫ್.ಪಿ. ಲಕ್ಷ್ಮೇಶ್ವರಮಠ ಮಾತನಾಡಿ, ಜನಸೇವೆಯೇ ಜನಾರ್ದನ ಸೇವೆ. ಭೂಮಿಯ ಮೇಲೆ ಬದುಕಲು ಕಂದಾಯ ಪಾವತಿಸುವಂತೆ ಸಮಾಜಸೇವೆಯನ್ನೂ ಸಲ್ಲಿಸಬೇಕು. ಸಮಾಜಸೇವಕರು ಸಾರ್ವಜನಿಕವಾಗಿ ಸೇವೆ ಸಲ್ಲಿಸುವಂತೆ ಸರ್ಕಾರಿ ನೌಕರರೂ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಬೇಕು ಎಂದರು.
ಅಖಿಲ ಭಾರತ ಜಂಗಮ ಸೇವಾ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತೋಟಯ್ಯ ಗಡ್ಡಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಿತಿ ಮೂರು ವರ್ಷಗಳನ್ನು ಪೂರ್ಣಗೊಳಿಸಿ ನಾಲ್ಕನೇ ವರ್ಷಕ್ಕೆ ಪದಾರೆ್ಣ ಮಾಡುತ್ತಿದೆ. ಕಳೆದ ವರ್ಷ 64 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 35 ವಿದ್ಯಾರ್ಥಿಗಳಿಗೆ ಸಂಸ್ಕಾರ ಶಿಬಿರ ತರಬೇತಿ ಹಾಗೂ 100ಕ್ಕೂ ಹೆಚ್ಚು ವಟುಗಳಿಗೆ ಅಯ್ಯಾಚಾರ-ಲಿಂಗದೀಕ್ಷೆ ನೀಡಲಾಗಿದೆ. ಎರಡು ಬಾರಿ ಆರೋಗ್ಯ ಶಿಬಿರವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಎಲ್ಲ ಸಾಮಾಜಿಕ ಕಾರ್ಯಗಳಿಗೆ ಅಡವೀಂದ್ರ ಶ್ರೀಮಠದ ಪೂಜ್ಯಶ್ರೀ ಮಹೇಶ್ವರ ಸ್ವಾಮೀಜಿ ಹೊಸಹಳ್ಳಿ ಮಠ ಅವರ ಪ್ರೇರಣೆ ಇದೆ. ಸಮಾಜಕ್ಕಾಗಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಕೈಗೊಳ್ಳಲು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 