ಅಮರ ಶಿಲ್ಪಿ ಜಕಣಾಚಾರ್ಯರ ಜಯಂತಿ ಆಚರಣೆ

Jayanti Celebration of Immortal Sculptor Jakanacharya

ಅಮರ ಶಿಲ್ಪಿ ಜಕಣಾಚಾರ್ಯರ ಜಯಂತಿ ಆಚರಣೆ 

ಸಿಂದಗಿ 02: ಒಬ್ಬ ಪೌರಾಣಿಕ ಭಾರತೀಯ ಶಿಲ್ಪಿಯಾಗಿದ್ದು ಕಲ್ಯಾಣಿ ಚಾಲುಕ್ಯರು ಮತ್ತು ಹೊಯ್ಸಳರಿಗೆ ಅನೇಕ ಉತ್ತಮ ದೇವಾಲಯಗಳನ್ನು ನಿರ್ಮಿಸಿದ ಕೀರ್ತಿ ಅಮರಶಿಲ್ಪಿ ಜಕಣಾಚಾರಿಗೆ ಸಲ್ಲುತ್ತದೆ ಎಂದು  ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು. 

     ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡ ಅಮರ ಶಿಲ್ಪಿ ಜಕಣಾಚಾರ್ಯರ ಜಯಂತಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿ, ಅಮರಶಿಲ್ಪಿ ಜಕಣಾಚಾರಿ ಯವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು  ನಿರ್ಮಿಸಿ ದಂತಕಥೆಯಾದ ಶಿಲ್ಪಿ, ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ. ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರೀಡಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು.  

ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು. ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು. ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು.  

ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು. ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆಯಲ್ಲಿ ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು ಎನ್ನುವ  ವಿವರವಾದ ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಮುರ್ಜಾವ್ ಮಠದ ಈರ​‍್ಪಯ್ಯ ಸ್ವಾಮಿ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಶಿವು ಬಡಿಗೇರ, ಚಂದ್ರಶೇಖರ ದೇವರಡ್ಡಿ, ಮೋಹನ ಪತ್ತಾರ, ಶ್ಯಾಮಸುಂದರ ಪತ್ತಾರ, ಸೋಮನಾಥ ಪತ್ತಾರ, ಶಿವಲಿಂಗ ಪತ್ತಾರ, ಮನೋಹರ ಬಡಿಗೇರ, ಈರಣ್ಣ ಪತ್ತಾರ,ಕಮಲಾಕಾರ ಪತ್ತಾರ, ಸುಭಾಶ   ಬಡಿಗೇರ ಕಾಳಪ್ಪ ಬಡಿಗೇರ ಭೀಮಾಶಂಕರ ಪತ್ತಾರ, ನಾಗು ಪತ್ತಾರ, ಗಂಗಾಧರ ಪತ್ತಾರ, ಅಶೋಕ ಬಡಿಗೇರ, ವಿನಾಯಕ ಬಡಿಗೇರ, ಗಂಗಾಧರ ಬಡಿಗೇರ, ವಿನೋದ ವಿಶ್ವಕರ್ಮ, ಚಿದಾನಂದ ಆಚಾರ್ಯ, ರಾಜೇಶ ಬಡಿಗೇರ ಸೇರಿದಂತೆ ಅನೇಕರಿದ್ದರು.