ಕೊಪ್ಪಳ 19: ಶುದ್ಧ ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ ಮಾಡಲು ಎಲ್ಲರೂ ಕೈ ಜೋಡಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಂಚಾಯತ್ರಾಜ್ ಇಂಜಿನೀಯರಿಂಗ್ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆ ಇವರುಗಳು ತಮ್ಮ ವ್ಯಾಪ್ತಿಯ ಕೆರೆಗಳ ಹೂಳನ್ನು ಎತ್ತುವುದರಿಂದ ನೀರಿನ ಸಂಗ್ರಹತೆಗೆ ಅನುಕೂಲವಾಗುತ್ತದೆ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆಯವರು ರೈತರ ಹೊಲಗಳಲ್ಲಿ ನೀರು ಸಂರಕ್ಷಣಾ ಕಾಮಗಾರಿಗಳನ್ನು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ತಮ್ಮ ವ್ಯಾಪ್ತಿಯ ಬೋರವೆಲ್ಗಳಿಗೆ ಮರು ಪೂರಣ ಘಟಕಗಳ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಾಯರ್ಾಲಯದ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಜಿಲ್ಲೆಯಲ್ಲಿ ಜಲಾಮೃತ ಯೋಜನೆಯ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಜಲಾಮೃತ ಯೋಜನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಮತ್ತು ಪ್ರಮುಖ ಅನುಷ್ಠಾನ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಲಾಮೃತ-2019 ಕಾರ್ಯಕ್ರಮವು ಜಲ ಸಾಕ್ಷರತೆ, ಜಲ ಸಂರಕ್ಷಣೆ, ನೀರಿನ ಪ್ರಜ್ಞಾವಂತ ಬಳಕೆ ಹಾಗೂ ಹಸಿರುಕರಣಕ್ಕಾಗಿ "ಜಲಾಮೃತ" ಎಂಬ ಸಮುದಾಯ ಚಾಲಿತ ಸಮಗ್ರ ಚಳುವಳಿಯೊಂದನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದೆ. ಅದರಂತೆ 2019ನೇ ವರ್ಷವನ್ನು ಜಲ ವರ್ಷವೆಂದು ಘೋಷಿಸಲಾಗಿದ್ದು, ಜಲ ವರ್ಷದ ಆಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ವಿವಿಧ ಚಟುವಟಿಕೆಗಳ ಮುಖಾಂತರ ಹಾಗೂ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಂಡು ಎಲ್ಲಾ ಸಾರ್ವಜನಿಕರಿಗೆ ಅರಿವು ಮೂಡಿಸಲಾಗಿದೆ. ಇದರ ನಿಮಿತ್ಯ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು, ಗ್ರಾಮಸ್ಥರು ಜೊತೆಗೂಡಿ ಶುದ್ಧ ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಯನ್ನು ಮಾಡೋಣವೆಂದು ಕರೆ ನೀಡಿದರು.
ಜಲಾಮೃತಯೋಜನೆಯ ಮಾರ್ಗಸೂಚಿಯನ್ವಯ ಕೆರೆಗಳ ಹೂಳೆತ್ತುವ ಕಾಮಗಾರಿ, ಹೊಸ ಕೆರೆ ನಿಮರ್ಾಣ, ಚೆಕ್ಡ್ಯಾಂ, ಗೋ-ಕಟ್ಟೆಗಳನ್ನು ನಿಮರ್ಾಣ ಮಾಡಲು ಸೂಚಿಸಿದರು. ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ ಮತ್ತು ಮಳೆಯ ಪ್ರಮಾಣವನ್ನು ಹೆಚ್ಚಿಸಲು ಗೋಮಾಳಾ, ಸ್ಮಶಾನ, ಹುಲ್ಲುಗಾವಲು, ರಸ್ತೆ ಬದಿ ನೀರಿನ ಕಾಲುವೆಗಳ ಅಕ್ಕ-ಪಕ್ಕ, ಶಾಲೆ-ಕಾಲೇಜುಗಳಲ್ಲಿ, ಸರ್ಕಾರಿ ಹಾಗೂ ಖಾಸಗಿ ಕಛೇರಿಗಳು ಮತ್ತು ಮುಂತಾದ ಸ್ಥಳಗಳಲ್ಲಿ ಅರಣ್ಯೀಕರಣ ಮಾಡಲು ಸೂಚಿಸಿದರು.
ನೀರು ಅಮೃತಕ್ಕೂ ಮಿಗಿಲು, ನೀರು ಪ್ರಕೃತಿ ನೀಡಿರುವ ವರ. ಬೇಸಿಗೆಯ ದಿನಗಳಲ್ಲಿ ನೀರು ನಮ್ಮ ಕೈಜಾರಿ ಹೋಗದಂತೆ ಸಂರಕ್ಷಿಸುವುದು ಅವಶ್ಯಕ. ಇದು ಮನ ಪರಿವರ್ತನೆಯ ಕಾಲ. ನಮ್ಮ ಮನಸ್ಸು ಪರಿವರ್ತನೆಯಾದರೆ ಮಾತ್ರ ಈ ಪರಿಸ್ಥಿತಿ ಬದಲಾಗಲು ಸಾಧ್ಯವೆಂದು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿವರ್ಾಕ ಅಧಿಕಾರಿ ರಘುನಂದನ್ ಮೂತರ್ಿ, ಉಪ ಕಾರ್ಯದಶರ್ಿ ಎನ್.ಕೆ.ತೊರವಿ, ಯೋಜನಾ ನಿದರ್ೇಶಕರು ರವಿ ಬಸರಿಹಳ್ಳಿ, ಪ್ರೋಬೇಷನರಿ ಅಧಿಕಾರಿ ನೇಹಾ ಜೈನ್, ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅನುಷ್ಠಾನ ಇಲಾಖೆ ಅಧಿಕಾರಿಗಳು ಮತ್ತು ತಾಲೂಕು ಪಂಚಾಯತಿಗಳ ಕಾರ್ಯನಿವರ್ಾಹಕ ಅಧಿಕಾರಿಗಳು, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಎಲ್ಲಾ ಸಂಯೋಜಕರು ಮತ್ತು ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.